ಪತ್ರಿಕಾ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ವಾರ್ತಾಸೌಧದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯನ್ನ ಹಮ್ಮಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪತ್ರಕರ್ತರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಪತ್ರಕರ್ತರಿಗೆ 5 ಲಕ್ಷ ರೂ.ವರೆಗೆ ನಗದು ರಹಿತ ಉಚಿತ ಆರೋಗ್ಯ ಸೇವೆಯ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಹಾಗೂ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೇವಾ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಈ ಮೂಲಕ ಪತ್ರಕರ್ತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಂತಾಗಿದೆ. ಒಟ್ಟು 2,500 ಪತ್ರಕರ್ತರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರಿಗೆ 5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಯೋಜನೆಗೆ ಇಂದು ಚಾಲನೆ ನೀಡಿದರು.

ಬಳಿಕ ಈ ಕಾರ್ಯಕ್ರಮದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್‌ ಪಾಸ್‌ ವಿತರಿಸಿದರು. ಬಳಿಕ ಪತ್ರಕರ್ತರಿಗೆ ಮೋ- ಜೋ ಕಿಟ್‌ ವಿತರಿಸಿದರು. ತದನಂತರ ಈ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಮುಖ್ಯ.. ಮಾದ್ಯಮಗಳು ಸ್ವತಂತ್ರವಾಗಿರಬೇಕು. ಸುಳ್ಳು ಸುದ್ದಿ, ದ್ವೇಷದ ಭಾಷಣ ತಡೆಗೆ ಕಾನೂನು ತರ್ತೀವಿ. ಸುಳ್ಳು ಸುದ್ದಿ ಹರಡುವುದು ಬೇಡ. ತನಿಖೆ ಮಾಡಿ ಸುದ್ದಿ ಮಾಡಿ. ಊಹೆ ರಾಜಕೀಯ ಜಾಸ್ತಿಯಾಗ್ತಿದೆ ಎಂದು ಹೇಳಿದರು.

Share.
Leave A Reply