ಹಾಸನ: ಲಾರಿಗೆ (Lorry) ಹಿಂಬದಿಯಿಂದ ಖಾಸಗಿ ಬಸ್ (Private Bus) ಡಿಕ್ಕಿ ಹೊಡೆದ ಪರಿಣಾಮ ಸುಮಾರು 20ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ (Hassan) ಚನ್ನರಾಯಪಟ್ಟಣ (Channarayapatna) ತಾಲೂಕಿನ ಬೈಪಾಸ್‌ ನಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಖಾಸಗಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಾಯಾಳುಗಳ ಪೈಕಿ 13 ಮಂದಿ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನುಳಿದವರು ಚನ್ನರಾಯಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಸಗಿ ಬಸ್ ಹಾಗೂ ಲಾರಿ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share.
Leave A Reply