ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಆಕ್ರಮ ನಡೆದಿದೆ ಎಂದು ಆರೋಪಿಸಿ ನಾಳೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನೆ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ.

ಜಾರ್ಖಂಡ್ ಮಾಜಿ ಸಿಎಂ ಶಿಬು ಸೋರೆನ್ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ಫ‍್ರೀಡಂ ಪಾರ್ಕ್ ನಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿ ಪ್ರತಿಭಟನೆಯನ್ನ ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿದೆ. ಚುನಾವಣಾ ಆಯೋಗದ ವಿರುದ್ದ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿತ್ತು.

ಈ ಕುರಿತು ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾಳೆ ಶಿಬು ಸೊರೇನ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೆಪಿಸಿಸಿ ಎಐಸಿಸಿ ವತಿಯಿಂದ ಶಿಬು ಸೋರೆನ್ ಅವರಿಗೆಗೆ ಸಂತಾಪ ಸೂಚನೆ. ಶಿಬು ಸೋರೆನ್ ಗೆ ಅಂತಿನ ಸಲ್ಲಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಹೋಗಲಿದ್ದಾರೆ. ಹಾಗಾಗಿ ನಾಳೆಯ ಪ್ರತಿಭಟನೆಯನ್ನ ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದಿದ್ದಾರೆ.

Share.
Leave A Reply