ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಮೊದಲು ಅವರ ಕುರ್ಚಿ ಉಳಿಸಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಅವರು ಅಶೋಕ್ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಎರಡು ವರ್ಷವಾದರೂ ಕೇಂದ್ರದಲ್ಲಿ ಅಧ್ಯಕ್ಷರನ್ನು ನೇಮಕ ಮಾಡಿಲ್ಲ. ಮಹಿಳೆಯರನ್ನು ಹುಡುಕುತ್ತಿದ್ದಾರೆ. ಅರ್ಧನಾರೇಶ್ವರರನ್ನು ಹುಡುಕಿದರೂ ಬಹಳ ಸಂತೋಷ ಎಂದು ಲೇವಡಿ ಮಾಡಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ. ಕೆ. ಶಿವಕುಮಾರ್ ದೆಹಲಿ ಪ್ರವಾಸ ವಿಚಾರದ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನದ ಬಗ್ಗೆ ಯಾವುದೇ ಗೊಂದಲಗಳು ಇಲ್ಲ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ನಡುವೆ ಯಾವುದೇ ಗೊಂದಲಗಳು ಇಲ್ಲ. ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ಎಂದರು.

