ಮುಂಗಾರು ಮುಂಚೆಯೇ ರಾಜ್ಯದಲ್ಲಿ ವರುಣಾರ್ಭಟ ಜೋರಾಗಿತ್ತು. ಆದ್ರೆ ಕೆಲದಿನಗಳಿಂದ ಕರುನಾಡಲ್ಲಿ ವರುಣದೇವ ಬ್ರೇಕ್ ಪಡೆದುಕೊಂಡಿದ್ದು, ಮತ್ತೆ ಅಬ್ಬರಿಸಲು ಸಜ್ಜಾಗ್ತಿದ್ದಾನೆ. ಮುಂಗಾರು ಪೂರ್ವವೇ ಎಡಬಿಡದೇ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ರು. ಸದ್ಯ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ರು, ಕಳೆದ ವಾರದಿಂದ ಮಳೆ ಕೊಂಚ ಗ್ಯಾಪ್ ನೀಡಿದೆ. ಆದ್ರೆ ಮತ್ತೆ ರಾಜ್ಯಕ್ಕೆ ಮಳೆರಾಯ ಎಂಟ್ರಿ ನೀಡಲಿದ್ದಾನೆ ಅಂತಾ ಹವಮಾನ ಇಲಾಖೆ (Rain Alert) ಮಾಹಿತಿ ನೀಡಿದೆ..
ಮುಂದಿನ ಕೆಲ ದಿನಗಳಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 13ರ ಬಳಿಕ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ತಿಳಿಸಿದೆ..
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ನಿನ್ನೆ ರಾಜ್ಯದ ಹಲವೆಡೆ ಮಳೆಯಾಗಿದ್ದು, ಕೆಲವೆಡೆ ಭಾರೀ ಮಳೆಯಾಗಿದ್ದರೆ, ಹಲವೆಡೆ ಸಾಧಾರಣ ಮಳೆಯಾಗಿದೆ. ರಾಯಚೂರಿನಲ್ಲಿ ವರುಣನ ಆರ್ಭಟ ಜೋರಾಗಿದ್ದು ಭಾನುವಾರ ಸುರಿದ ಭಾರಿ ಮಳೆಗೆ ಸೇತುವೆ ಕೊಚ್ಚಿಹೋಗಿದೆ.
ಕೊಪ್ಪಳದ ಬೆಟಗೇರಿ ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಮನೆಗೆ ನೀರುನುಗ್ಗಿ ಜನರು ಕಂಗಾಲಾಗಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಭಾರಿ ಮಳೆಯ ಕಾರಣ ಅನೇಕ ಅವಾಂತರಗಳು ಸೃಷ್ಟಿಯಾಗಿ ಜನರು ಹೈರಾಣಾಗಿದ್ದಾರೆ.
