ಬೆಂಗಳೂರು: ಜನವರಿ ತಿಂಗಳು ಮುಗಿಯಲು ಬಂದರೂ ರಾಜ್ಯದಲ್ಲಿ ಇನ್ನೂ ಕೊರೆಯುವ ಚಳಿ ಕಡಿಮೆಯಾಗುತ್ತಿಲ್ಲ. ಈ ಮಧ್ಯೆ ಮಳೆಯ ಮುನ್ಸೂಚನೆ ಕೂಡ ಸಿಕ್ಕಿದೆ.

ದಕ್ಷಿಣ ಕರಾವಳಿಯ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸೇರಿದಂತೆ ನಾಳೆಯವರೆಗೆ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

ಇನ್ನುಳಿದಂತೆ ಬಳ್ಳಾರಿ, ಬೆಂಗಳೂರು ನಗರ- ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಅಲ್ಲದೇ, ರಾಜ್ಯದ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ಚಳಿಯ ಅನುಭವ ಮತ್ತಷ್ಟು ಹೆಚ್ಚಾಗಲಿದೆ. ದಕ್ಷಿಣ ಕರ್ನಾಟಕದಲ್ಲಿ 3 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share.
Leave A Reply