ರಾಜಕೀಯ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ನೀಡಿರುವ ಹೇಳಿಕೆಯನ್ನು ನಿರ್ಲಕ್ಷಿಸುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಬಳಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ನಲ್ಲಿ ರಾಜಕೀಯ ಬೆಳವಣಿಗೆಯಾಗಲಿದೆ ಎಂದು ರಾಜಣ್ಣ ಹೇಳಿದ್ದಾರೆ. ಆದರೆ ಇದೇ ರೀತಿಯ ಬೆಳವಣಿಗೆ ಎಂದು ಹೇಳಿಲ್ಲ. ಅದನ್ನು ಮಾಧ್ಯಮಗಳು ತಮಗೆ ಬೇಕಾದಂತೆ ಊಹೆ ಮಾಡಿಕೊಂಡು ವರದಿ ಮಾಡಿವೆ ಎಂದರು.

ಕಾಂಗ್ರೆಸ್‌‍ನಲ್ಲಿ ಯಾವುದೇ ಆಂತರಿಕ ಬಿಕ್ಕಟ್ಟಿಲ್ಲ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಬೆಂಗಳೂರಿಗೆ ಬರುತ್ತಿದ್ದಾರೆ. ಪಕ್ಷದಲ್ಲಿ ಸಮಸ್ಯೆ ಇದೆ ಎಂಬ ಕಾರಣಕ್ಕಾಗಿ ಅವರು ಬರುತ್ತಿದ್ದಾರೆ ಎಂಬ ವ್ಯಾಖ್ಯಾನ ಸರಿಯಲ್ಲ ಎಂದು ಹೇಳಿದರು.

ರಾಜಣ್ಣ ಅವರ ಹೇಳಿಕೆಯನ್ನು ನಿರ್ಲಕ್ಷಿಸುವುದು ಸೂಕ್ತ. ಸಣ್ಣಪುಟ್ಟ ಬದಲಾವಣೆಯಾಗಲಿದೆ ಎಂದು ಹೇಳಿರುವುದನ್ನು ಹೀಗೆಯೇ ವರದಿ ಮಾಡಬೇಕೆಂದು ಹೇಳಲು ನಾನು ಪತ್ರಕರ್ತ ಅಲ್ಲ ಎಂದರು.

ಮಲೈಮಹದೇಶ್ವರ ಬೆಟ್ಟದಲ್ಲಿ 4 ಹುಲಿಗಳ ಅಸಹಜ ಸಾವಿನ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share.
Leave A Reply