BosstvKannada

ರಾಮಾಯಣ ಟೀಸರ್‌ ರಿಲೀಸ್‌.. ರಾವಣನಾಗಿ ಯಶ್‌!

‘ರಾಮಾಯಣ’ಕ್ಕಾಗಿ ಸಿನಿಪ್ರಿಯರು ಕಾತುರದಿಂದ ಕಾಯ್ತಿದ್ದಾರೆ. ಯಶ್‌ ನಟಿಸಿ ನಿರ್ಮಾಣ ಮಾಡುತ್ತಿರುವ ಪ್ಯಾನ್‌ ಇಂಡಿಯಾ ಸಿನಿಮಾ ರಾಮಾಯಣದ ಮೊದಲ ಭಾಗದ ಟೀಸರ್‌ ಗ್ಲಿಂಪ್ಸ್‌ ರಿಲೀಸ್‌ ಆಗಿದ್ದು, ಸಿನಿ ದುನಿಯಾದಲ್ಲಿ ಸೆನ್ಸೇಷನ್‌ ಸೃಷ್ಟಿಸಿದೆ. ರಾಮಾಯಣ ಹೊಸ ಅವತಾರದಲ್ಲಿ ಮತ್ತೆ ದೊಡ್ಡ ಪರದೆಗೆ ಬರ್ತಿದೆ.. ಇದೀಗ ಸಿನಿಮಾದ ಮೊದಲ ಭಾಗದ ಚಿತ್ರೀಕರಣ ಪೂರ್ಣವಾಗಿದ್ದು, ಸಿನಿಮಾದ ಟೀಸರ್ ಅಥವಾ ಗ್ಲಿಂಪ್ಸ್ ಅನ್ನು ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ ನೆಕ್ಸಸ್ ಮಾಲ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ರಾಮಾಯಣ ಗ್ಲಿಂಪ್ಸ್ ಬಿಡುಗಡೆ ಮಾಡಲಾಗಿದೆ. ರಿಯಾಲಿಟಿ ಮತ್ತು ವಿಎಫ್​ಎಕ್ಸ್ ಎರಡನ್ನೂ ಬಳಸಿ ರಿಚ್‌ ಆಗಿ ಟೀಸರ್‌ ಮಾಡಿದ್ದು, ಸಖತ್‌ ಸೌಂಡ್‌ ಮಾಡುತ್ತಿದೆ.. ಟೀಸರ್‌ ಗ್ಲಿಂಪ್ಸ್‌ ನೋಡಿದ ಅಭಿಮಾನಿಗಳು, ಸಖತ್‌ ಥ್ರಿಲ್‌ ಆಗಿದ್ದಾರೆ.

ಸದ್ಯ ಟಾಕ್ಸಿಕ್ ಹಾಗೂ ರಾಮಾಯಣ, ಎರಡೂ ಚಿತ್ರಗಳ ನಿರ್ಮಾಣ ಹಾಗೂ ನಟನೆಯಲ್ಲಿ ಯಶ್ ಬ್ಯುಸಿ ಇದ್ದಾರೆ. ಹೀಗಾಗಿ ಟೈಟ್ ಶೆಡ್ಯೂಲ್ ಶೂಟಿಂಗ್ ಮುಗಿಸಿ ಇದೀಗ ಅಲ್ಪ ಸಮಯದಲ್ಲಿ ಪ್ರವಾಸಕ್ಕೆಂದು ಯಶ್‌ ಹೋಗಿದ್ದಾರೆ.

ಇನ್ನು, ಈ ಕುರಿತು ಟ್ವೀಟ್‌ ಮಾಡಿರುವ ಯಶ್‌, ಆರಂಭಕ್ಕೆ ಸ್ವಾಗತ. ರಾಮ v/s ರಾವಣನ ಅಮರ ಕಥೆಯನ್ನು ಆಚರಿಸೋಣ. ನಮ್ಮ ಸತ್ಯ. ನಮ್ಮ ಇತಿಹಾಸ ಎಂದು ಯಶ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. 10 ವರ್ಷಗಳ ಆಕಾಂಕ್ಷೆ. ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯವನ್ನು ಜಗತ್ತಿಗೆ ತರುವ ನಿರಂತರ ದೃಢನಿಶ್ಚಯ. ರಾಮಾಯಣವನ್ನು ಅತ್ಯಂತ ಗೌರವದಿಂದ ಪ್ರಸ್ತುತ ಪಡಿಸುತ್ತಿದ್ದೇವೆ ಅಂತಾ ಪೋಸ್ಟ್‌ ಹಾಕಿದ್ದಾರೆ.

ಇನ್ನು, ಈ ಸಿನಿಮಾಕ್ಕೆ ಸುಮಾರು 800 ಕೋಟಿ ರೂಪಾಯಿ ಹಣವನ್ನು ಖರ್ಚು ಮಾಡಲಾಗುತ್ತಿದೆ. ನಟ ಯಶ್ ಈ ಸಿನಿಮಾದಲ್ಲಿ ರಾವಣನ ಪಾತ್ರ ನಿರ್ವಹಿಸುತ್ತಿರುವ ಜೊತೆಗೆ ಸಹ ನಿರ್ಮಾಪಕರೂ ಆಗಿದ್ದು, ‌ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹೆಚ್ಚಿಸಿದೆ.

ಈ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್‌ ಕಪೂರ್‌, ಸೀತೆ ಪಾತ್ರದಲ್ಲಿ ಸಾಯಿಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಯಶ್‌ ಕಾಣಿಸಿಕೊಂಡಿದ್ದಾರೆ.

Exit mobile version