ಯಶ್ ನಟಿಸಿ ನಿರ್ಮಿಸುತ್ತಿರುವ ಮಹಾತ್ವಾಕಾಂಕ್ಷೆಯ ಪ್ರಾಜೆಕ್ಟ್ ರಾಮಾಯಣ ಚಿತ್ರದ ಅಫಿಷಿಯಲ್ ಫಸ್ಟ್ ಟೈಟಲ್ ಟೀಸರ್ ರಿಲೀಸ್ ಆಗಿದೆ. ರಾಮಾಯಣ ಫಸ್ಟ್ ಟೈಟಲ್ ಟೀಸರ್ ಕೊನೆಗೂ ರಿಲೀಸ್ ಆಗಿದೆ. ಟೀಸರ್‌ನಲ್ಲಿ ರಾಮ-ರಾವಣ ಆರ್ಭಟ ಶುರುವಾಗಿದೆ.
ರಾಮಾಯಣ ಫಸ್ಟ್ ಟೈಟಲ್ ಟೀಸರ್ ಅನ್ನು ರಾಕಿಂಗ್ ಸ್ಟಾರ್ ಯಶ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹತ್ತು ವರ್ಷಗಳ ಆಕಾಂಕ್ಷೆ. ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯವನ್ನು ಜಗತ್ತಿಗೆ ತರುವ ನಿರಂತರ ದೃಢನಿಶ್ಚಯ.

ರಾಮಾಯಣವನ್ನು ಅತ್ಯಂತ ಗೌರವದಿಂದ ಪ್ರಸ್ತುತಪಡಿಸಲು ವಿಶ್ವದ ಕೆಲವು ಅತ್ಯುತ್ತಮ ವ್ಯಕ್ತಿಗಳು ಒಟ್ಟಾಗಿ ಶ್ರಮಿಸಿದ್ದಾರೆ. ಅದರ ಫಲಿತಾಂಶ ಇದು ಎಂದು ಯಶ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.