ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಾಯಕ ರಜತ್‌ ಪಾಟೀದಾರ್‌ ಭರ್ಜರಿ ಶತಕ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ದುಲಿಪ್‌ ಟ್ರೋಪಿಯಲ್ಲಿ ಪಾಟೀದಾರ್‌ ಸೆಂಚುರಿ ಸಿಡಿಸಿ ಸಖತ್‌ ಸೌಂಡ್‌ ಮಾಡಿದ್ದಾರೆ. ಕೇಂದ್ರ ತಂಡವನ್ನು ಮುನ್ನಡೆಸುತ್ತಿರುವ ರಜತ್‌ ಪಾಟೀದಾರ್‌ ದುಲೀಪ್ ಟ್ರೋಫಿಯ ಕ್ವಾರ್ಟರ್ ಫೈನಲ್‌ನಲ್ಲೂ ಶತಕ ಬಾರಿಸಿದ್ರು.

ಇದೀಗ ಫೈನಲ್‌ನಲ್ಲಿಯೂ ಕೂಡ ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. 112 ಎಸೆತಗಳಲ್ಲಿ 100 ರನ್‌ ಗಳಿಸಿದ ಪಾಟೀದಾರ್‌, 12 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿದ್ದಾರೆ. ಅಂದಹಾಗೆ ಇದು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ರಜತ್ ಅವರ 15 ನೇ ಶತಕವಾಗಿದೆ. ದುಲೀಪ್ ಟ್ರೋಫಿಯಲ್ಲಿ ಅಬ್ಬರಿಸುತ್ತಿರುವ ರಜತ್ ಪಾಟಿದಾರ್ ಆಡಿರುವ 4 ಇನ್ನಿಂಗ್ಸ್‌ಗಳಲ್ಲಿ 369 ರನ್ ಗಳಿಸಿದ್ದಾರೆ. ಈ ಮೂಲಕ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Share.
Leave A Reply