Site icon BosstvKannada

ಪಂಜಾಬ್‌ ವಿರುದ್ಧ ಗೆದ್ದುಬೀಗಿದ RCBಗೆ ತವರಲ್ಲಿ ಅದ್ಧೂರಿ ಸ್ವಾಗತ

ಕೊನೆಗೂ ಆರ್‌ಸಿಬಿ ಬಾಯ್ಸ್‌ ಕಪ್‌ ಗೆದ್ದು ಬೆಂಗಳೂರಿಗೆ ಮರಳಿದ್ದಾರೆ. RCB ಟೀಮ್‌ ಗೆ ಬೆಂಗಳೂರಿನಲ್ಲಿ ಅಭಿಮಾನಿ ಗಳಿಂದ ಅದ್ದೂರಿ ಸ್ವಾಗತ ದೊರೆತಿದೆ. ಗುಜರಾತ್​​ನ ಅಹ್ಮದಾಬಾದ್​​ನಿಂದ ಬೆಂಗಳೂರಿನ ಹೆಚ್​ಎಎಲ್​ಗೆ ಬಂದಿಳಿದ ಆರ್​ಸಿಬಿ ಆಟಗಾರರನ್ನು ಸರ್ಕಾರದ ಪರವಾಗಿ ಖುದ್ದು ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದರು.

ಆರ್​ಸಿಬಿ ಆಟಗಾರರನ್ನು ವಿಶೇಷ ಬಸ್ಸುಗಳಲ್ಲಿ ವಿಧಾನಸೌಧಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ತಾಜ್‌ ವೇಸ್ಟಂಡ್‌ನಲ್ಲಿ ಆರ್‌ಸಿಬಿ ತಂಡ ವಿಶ್ರಾಂತಿ ಪಡೆಯಲಿದೆ.. ಅಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಟಗಾರರನ್ನು ಭೇಟಿಯಾಗಲಿದ್ದಾರೆ..

ಬಳಿಕ ಕರ್ನಾಟಕದ ಹೆಮ್ಮೆಯ ಆರ್‌ಸಿಬಿ ತಂಡವನ್ನು ಸಮಸ್ತ ಕನ್ನಡಿಗರ ಪರವಾಗಿ ವಿಧಾನಸೌಧದಲ್ಲಿ ಆಯೋಜಿಸಿರುವ ಸನ್ಮಾನ ಕಾರ್ಯಕ್ರಮದಲ್ಲಿ ಆರ್‌ಸಿಬಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ವಿಧಾನಸೌಧದಿಂದ ಆಟಗಾರರನ್ನು ನೇರವಾಗಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕರೆದೊಯ್ಯಲಾಗುತ್ತದೆ. ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 6 ಗಂಟೆಗೆ ಪರೇಡ್ ನಡೆಯಲಿದೆ..

Exit mobile version