BosstvKannada

RCB Stampede: ಕಾಲ್ತುಳಿತದಲ್ಲಿ 11 ಜನರ ಸಾವು, ಸ್ವಯಂ ಪ್ರೇರಿತ PIL ದಾಖಲಿಸಿದ ಹೈಕೋರ್ಟ್

ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ, ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ದಾವೆ (PIL) ದಾಖಲಿಸಿಕೊಂಡಿದೆ. ಈ ಘಟನೆ ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಹೈಕೋರ್ಟ್ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿದೆ. ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿಯವರಿದ್ದ ಪೀಠ, ಇಂದು ವಿಚಾರಣೆ ನಡೆಸಲಿದೆ. ದುರಂತದ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಹೈಕೋರ್ಟ್ ಈ ಪ್ರಕರಣವನ್ನು ತೀವ್ರ ಗಂಭೀರವಾಗಿ ಪರಿಗಣಿಸಿ, ಪ್ರಾಣ ಕಳೆದುಕೊಂಡಿರುವ ಬಗ್ಗೆ ಹೈಕೋರ್ಟ್ ಪೀಠ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ಘಟನೆ ನಡೆಯಲು ಪ್ರಮುಖ ಕಾರಣ ಭದ್ರತಾ ಲೋಪವೇ ಎಂದು ಪ್ರಾಥಮಿಕವಾಗಿ ಪೀಠ ಅಭಿಪ್ರಾಯಪಟ್ಟಿದೆ. ಆದ್ದರಿಂದ, ಭದ್ರತಾ ವ್ಯವಸ್ಥೆಗಳಲ್ಲಿ ಎಲ್ಲಿ ಲೋಪವಾಗಿದೆ ಎಂಬ ಬಗ್ಗೆ ರಾಜ್ಯ ಸರ್ಕಾರದಿಂದ ವಿವರವಾದ ವರದಿ ಕೇಳಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠವು ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರನ್ನು ಕೇಳಿದೆ. ಪ್ರಕರಣ ಕುರಿತು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದೆ.

ಅಗತ್ಯ ವಿವರಗಳನ್ನು ಒದಗಿಸುವುದಾಗಿ ಅವರು ಪೀಠಕ್ಕೆ ತಿಳಿಸಿದ ನಂತರ ನ್ಯಾಯಾಲಯವು ವಿಚಾರಣೆಯನ್ನು ಮಧ್ಯಾಹ್ನ 2:30 ಕ್ಕೆ ನಿಗದಿಪಡಿಸಿತು.

Exit mobile version