ಐಪಿಎಲ್ ನಲ್ಲಿ 18 ವರ್ಷಗಳಲ್ಲಿ ಮೊದಲ ಬಾರಿ RCB ತಂಡ ಗೆಲುವು ಸಾಧಿಸಿದೆ. ಈ ಬಾರಿ ಕಪ್ ನಮ್ದೇ ಎನ್ನುತ್ತಿ ದ್ದರೂ ಗೆಲ್ಲಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ RCB ವನವಾಸ ಅಂತ್ಯವಾಗಿದ್ದು, ಕೊನೆಗೂ ಕಪ್ ಗೆದ್ದಿದೆ. ಇನ್ನು RCB ಫ್ಯಾನ್ಸ್ ಖೂಷಿಗೆ ಪಾರವೇ ಇಲ್ಲದಂತಾಗಿದೆ. ಆರ್‌ಸಿಬಿ ಕಪ್ ಗೆದ್ದ (RCB Win IPL 2025) ಖೂಷಿಗೆ ರಾಜ್ಯದಲ್ಲಿ ಹಬ್ಬದ ವಾತವರಣ ಮನೆಮಾಡಿದೆ.. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಹಮ್ಮಿಕೊಂಡಿದೆ.
ತಂಡವನ್ನು ಅಭಿನಂದಿಸಿದ ಸಿದ್ದರಾಮಯ್ಯ
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
Rrrrrrrrr…. Cccccccc…. Bbbbbbbbb….
— Siddaramaiah (@siddaramaiah) June 3, 2025
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.
ಆರ್‌ಸಿಬಿಯ ಈ… pic.twitter.com/dYG4OHVNVN
ಈ ಬಗ್ಗೆ ಟ್ವೀಟ್ ಮಾಡಿದ್ದ ಅವರು, ಆರ್‌ಸಿಬಿಯ ಈ ವಿಜಯದಲ್ಲಿ ವಿರಾಟ್ ಕೋಹ್ಲಿಯ 18 ವರ್ಷಗಳ ಕಾಲದ ತಪಸ್ಸಿದೆ, ನಿಷ್ಠೆ, ಬದ್ಧತೆಯಿದೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಆರ್‌ಸಿಬಿ ಪ್ರತಿ ಆಟಗಾರರು ಚಾಂಪಿಯನ್ ಪ್ರದರ್ಶನ ನೀಡಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಇದು ಇತಿಹಾಸ ಸೃಷ್ಟಿಸಿದ ದಿನ. ಕೊನೆಯದಾಗಿ, ಈ ಸಲ ಕಪ್ ನಮ್ದೆ ಎಂದು ಟ್ವೀಟ್ ಮೂಲಕ ಖುಷಿ ಹಂಚಿಕೊಂಡಿದ್ದಾರೆ.

