Site icon BosstvKannada

”ಸೌಜನ್ಯ ಪ್ರಕರಣದ ಮರು ತನಿಖೆ : ಸೌಜನ್ಯ ತಾಯಿ ತೀರ್ಮಾನಿಸಬೇಕು”

ಸೌಜನ್ಯ ಪ್ರಕರಣದ ಮರು ತನಿಖೆ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ನಾನು ಅದರ ತೀರ್ಪನ್ನು ನೋಡಿಲ್ಲ. ಈ ಬಗ್ಗೆ ಸೌಜನ್ಯ ತಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸುದ್ದಿಗಾರರಿಗೆ ತಿಳಿಸಿದ್ರು.

ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಬಗ್ಗೆ ಮಾತನಾಡಿದರು. ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ.

ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು. ಒಂದು ಕಡೆ ವೀರೇಂದ್ರ ಹೆಗಡೆಯವರ ಪರ ಎನ್ನುತ್ತಾರೆ ಮತ್ತೊಂದಡೆ ಸೌಜನ್ಯ ಪರ ಎನ್ನುತ್ತಾರೆ ಎಂದು ಬಿಜೆಪಿಗೆ ಮಾತಿನಲ್ಲೇ ಗುಮ್ಮಿದ್ದಾರೆ.

ಒಂದು ಕಡೆ ವೀರೇಂದ್ರ ಹೆಗ್ಗಡೆಯವರಿಗೆ ಜೈಕಾರ ಹಾಕುತ್ತಾರೆ ಮತ್ತೊಂದು ಕಡೆ ಸೌಜನ್ಯ ಪರ ಇರುವುದಾಗಿ ಹೇಳುತ್ತಾರೆ. ನಿಜವಾಗಿಯೂ ಇವರು ಯಾರ ಪರ ಇದ್ದಾರೆ ಅಂತಾ ಈವರೆಗೂ ಗೊತ್ತಿಲ್ಲ ಅಂತಾ ಬಿಜೆಪಿಗೆ ಟಾಂಗ್‌ ಕೊಟ್ಟಿದ್ದಾರೆ.

ಸೌಜನ್ಯ ಪ್ರಕರಣದ ಮರು ತನಿಖೆ ಅಗತ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ನಾನು ಅದರ ತೀರ್ಪನ್ನು ನೋಡಿಲ್ಲ. ಈ ಬಗ್ಗೆ ಸೌಜನ್ಯ ತಾಯಿ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸುದ್ದಿಗಾರರಿಗೆ ತಿಳಿಸಿದ್ರು.

Read Also : ಬಿಜೆಪಿಯವರು ಸೌಜನ್ಯ ಪರನಾ? ವೀರೇಂದ್ರ ಹೆಗ್ಗಡೆ ಪರನಾ..? ಬಿಜೆಪಿಗೆ ಸಿದ್ದರಾಮಯ್ಯ ಕೌಂಟರ್‌!

Exit mobile version