ಜಿತೇಶ್ ಶರ್ಮಾ ನಾಯಕನ ಆಟಕ್ಕೆ RCB ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ 18ನೇ ಆವೃತ್ತಿಯ ಲೀಗ್ ಪಂದ್ಯಗಳನ್ನು ಮುಗಿಸಿದ್ದು, ಕ್ವಾಲಿಫೈಯರ್-1ಗೆ ಲಗ್ಗೆಯಿಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ತಂಡ ಪಂತ್ ಅಮೋಘ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಬೃಹತ್ ಮೊತ್ತದ ಗುರಿ ಬೆನ್ನಟ್ಟಿದ ಆರ್‌ಸಿಬಿ 18.4 ಓವರ್‌ಗಳಲ್ಲಿ ಕೇವಲ 4 ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿ ಗೆದ್ದು ಬೀಗಿದೆ. ಈ ಮೂಲಕ ಏಕನಾ ಕ್ರೀಡಾಂಗಣದಲ್ಲಿ ಅತಿದೊಡ್ಡ ಮೊತ್ತ ಚೇಸಿಂಗ್ ಮಾಡಿದ ದಾಖಲೆಯನ್ನೂ ಬರೆದಿದೆ.
ಚೇಸಿಂಗ್ ಆರಂಭಿಸಿದ ಆರ್‌ಸಿಬಿ ಬಿರುಸಿನ ಆಟಕ್ಕೆ ಮುಂದಾಯಿತು. ಮೊದಲ ವಿಕೆಟಿಗೆ ವಿರಾಟ್ ಕೊಹ್ಲಿ, ಸಾಲ್ಟ್ ಜೋಡಿ 34 ಎಸೆತಗಳಲ್ಲಿ 61 ರನ್‌ಗಳ ಜೊತೆಯಾಟ ನೀಡಿತ್ತು. ಫಿಲ್ ಸಾಲ್ಟ್ 19 ಎಸೆತಗಳಲ್ಲಿ 30 ರನ್‌ಗಳಿಸಿ ಔಟಾಗುತ್ತಿದ್ದಂತೆ ರನ್ ವೇಗವೂ ಕಡಿತಗೊಂಡಿತ್ತು. ಅಲ್ಲದೇ ರಜತ್ ಪಾಟೀದಾರ್, ಲಿಯಾಮ್ ಲಿವಿಂಗ್‌ಸ್ಟೋನ್ ಬ್ಯಾಟಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದರು. ಇದರಿಂದ ಆರ್‌ಸಿಬಿಗೆ ಗೆಲುವು ಕಠಿಣವಾಗಿತ್ತು.
Also Read: kamal haasan controversy : ನಟ ಕಮಲ್ ಹಾಸನ್ ವಿವಾದಿತ ಹೇಳಿಕೆಗೆ ‘ಕರವೇ’ ಕಿಡಿ
ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಆರ್‌ಸಿಬಿಗೆ ಜಿತೇಶ್ ಶರ್ಮಾ – ಮಯಾಂಕ್ ಅಗರ್ವಾಲ್ ಬ್ಯಾಟಿಂಗ್‌ನಲ್ಲಿ ಬಲ ತುಂಬಿದರು. 5ನೇ ವಿಕೆಟಿಗೆ ಈ ಜೋಡಿ 45 ಎಸೆತಗಳಲ್ಲಿ ಸ್ಫೋಟಕ 107 ರನ್ ಬಾರಿಸಿತು. ಇದು ತಂಡದ ಗೆಲುವನ್ನು ಸುಲಭವಾಗಿಸಿತು. 257.57 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಜಿತೇಶ್ ಶರ್ಮಾ 33 ಎಸೆತಗಳಲ್ಲಿ 85 ರನ್ ಚಚ್ಚಿದ್ರೆ, ವಿರಾಟ್ ಕೊಹ್ಲಿ 54 ರನ್ , ಮಯಾಂಕ್ ಅಗರ್ವಾಲ್ 41 ರನ್ ಫಿಲ್ ಸಾಲ್ಟ್ 30 ರನ್, ರಜತ್ ಪಾಟೀದಾರ್ 14 ರನ್ ಗಳಿಸಿದ್ರು. ಈ ಗೆಲುವಿನ ಮೂಲಕ ಆರ್‌ಸಿಬಿ ಮೊದಲ ಕ್ವಾಲಿಫೈಯರ್‌ಗೆ ಲಗ್ಗೆ ಇಟ್ಟು, ಕಪ್ ಗೆಲ್ಲುವ ಭರವಸೆ ಮೂಡಿಸಿದೆ.