Site icon BosstvKannada

ರೇಣುಕಾಸ್ವಾಮಿ ಕೊಲೆ ಕೇಸ್‌ : ನಟ ದರ್ಶನ್‌ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ʼಸುಪ್ರೀಂʼ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನಿನ ವಿರುದ್ಧ ಕರ್ನಾಟಕ ಸರಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ಲ್ಲಿ ನಡೆಯಿತು. ನಟ ದರ್ಶನ್ ಸೇರಿದಂತೆ ಒಟ್ಟು 7 ಮಂದಿಗೆ ನೀಡಿದ್ದ ಹೈಕೋರ್ಟ್‌ನ ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ ಕೋರಿತ್ತು.

ಕಳೆದ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ, ಪ್ರದೇಶ್, ಜಗದೀಶ್, ಲಕ್ಷ್ಮಣ್, ಅನುಕುಮಾರ್ ಹಾಗೂ ನಾಗರಾಜುಗೆ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿದೆ.

ಈ ವೇಳೆ, ಬಂಧನದ ಕಾರಣಗಳನ್ನಷ್ಟೇ ನಾವು ಕೇಳುತ್ತಿದ್ದೇವೆ. ಬೇರೆ ಕೇಳುತ್ತಿಲ್ಲ. ಬಂಧನ ಕಾನೂನುಬದ್ಧವಾಗಿಲ್ಲ ಎನ್ನುವುದಾಗಿದೆ, ಇದಕ್ಕೆ ಉತ್ತರ ಕೊಡಿ ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು.

Exit mobile version