ಮೈಸೂರು: ಹಾಡಹಗಲೇ ಗನ್ ತೋರಿಸಿ ಚಿನ್ನದಂಗಡಿ ದೋಚಿರುವ ಘಟನೆ ನಡೆದಿದೆ.
ಜಿಲ್ಲೆಯ ಹುಣಸೂರು (Hunsur) ಪಟ್ಟಣದ ಈ ಘಟನೆ ನಡೆದಿದೆ. 5ಕ್ಕೂ ಅಧಿಕ ಜನರ ಗ್ಯಾಂಗ್ ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ಮಾಡಿ ಪರಾರಿಯಾಗಿದೆ. ಏಕಾಏಕಿ ಚಿನ್ನದಂಗಡಿಗೆ ನುಗ್ಗಿ ಬರೋಬ್ಬರಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.
ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ʼ ಚಿನ್ನದಂಗಡಿಯಲ್ಲಿ ದರೋಡೆ ನಡೆದಿದೆ. ದರೋಡೆಕೋರರು ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂ. ಮೌಲ್ಯದಷ್ಟು ಚಿನ್ನ-ವಜ್ರಾಭರಣ ದರೋಡೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

