ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ (Biklu Shiva) ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ (Byrati Basavaraj) ಸಂಕಷ್ಟ ಶುರುವಾಗಿದ್ದು, ಬಂಧನ ಭೀತಿ ಎದುರಾಗಿದೆ.

ಬಿಕ್ಲು ಶಿವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಹೀಗಾಗಿ ಮಾಜಿ ಸಚಿವರಿಗೆ ಬಂಧನ ಭೀತಿ ಎದುರಾಗಿದೆ.

ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆಯನ್ನು ಬೈರತಿ ಬಸವರಾಜ್ ಮೇಲೆ ಹಾಕಲಾಗಿತ್ತು. ಅದನ್ನು ಪ್ರಶ್ನಿಸಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಬಸವರಾಜ್‌ಗೆ ಈ ವಿಚಾರದಲ್ಲಿ ರಿಲೀಫ್ ಸಿಕ್ಕಿದೆ. ಆದರೆ, ಬಂಧನದಿಂದ ತಪ್ಪಿಸಿಕೊಳ್ಳಲು ಮಾತ್ರ ಆಗುತ್ತಿಲ್ಲ.

ಹೈಕೋರ್ಟ್‌ನಲ್ಲಿಯೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಸಾಧ್ಯವಿಲ್ಲ. ನಿಯಮಾನುಸಾರವಾಗಿ ಕೆಳಹಂತದ ನ್ಯಾಯಾಲಯದಲ್ಲಿಯೇ ನಿರೀಕ್ಷಣಾ‌ ಜಾಮೀನು ಪಡೆದುಕೊಳ್ಳಬಹುದು. ನಿರೀಕ್ಷಣಾ‌ ಜಾಮೀನು ತೀರ್ಮಾನ ಮಾಡುವುದು ಕೆಳಹಂತದ ನ್ಯಾಯಾಲಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ಜಾಮೀನು ಸಿಗುವವರೆಗೂ ಮಧ್ಯಂತರ ರಕ್ಷಣೆಗೆ ಮನವಿಯನ್ನು ಹೈಕೋರ್ಟ್ ನಿರಾಕರಿಸಿದೆ.

Share.
Leave A Reply