Site icon BosstvKannada

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಕೇಸ್‌: FIR ರದ್ದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಾಸಕ ಬೈರತಿ ಬಸವರಾಜ್‌, ಇಂದು ವಿಚಾರಣೆಗೆ ಹಾಜರ್‌!

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೈರತಿ ಬಸವರಾಜ್‌ ಭಾರತಿ ನಗರ ಠಾಣೆಯಲ್ಲಿ ವಿಚಾರಣೆ ಹಾಜರಾಗಿದ್ದಾರೆ. ಎಸಿಪಿ ಪ್ರಕಾಶ ರಾಥೋಡ್‌ರಿಂದ ವಿಚಾರಣೆ ನಡೆಯುತ್ತಿದೆ. ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್ ಇಂದು 2ನೇ ಬಾರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಈ ನಡುವೆ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಜು.18 ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜು.19 ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಇಂದಿಗೆ ಮುಂದೂಡಿಕೆ ಮಾಡಿತ್ತು. ಇನ್ನು ಈಗಾಗಲೇ ಈ ಪ್ರಕರಣದಲ್ಲಿ 11 ಜನ ಆರೋಪಿಗಳು ಅರೆಸ್ಟ್ ಆಗಿದ್ದು, ಇವರಲ್ಲಿ ಹಲವರು ಬೈರತಿ ಬಸವರಾಜ್‌ಗೆ ಆಪ್ತರು ಎನ್ನಲಾಗಿದೆ. ಆರೋಪಿಗಳ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ಸದ್ಯ ಜಗದೀಶ್ ನಾಪತ್ತೆಯಾಗಿರೋ ಹಿನ್ನೆಲೆ ಇಂದು ಬೈರತಿ ಬಸವರಾಜ್ ರನ್ನ ಬಂಧಿಸುವ ಸಾಧ್ಯತೆ ಇಲ್ಲ ಎನ್ನಲಾಗ್ತಿದೆ.

Exit mobile version