ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಯ್ (Sarigama Vijay)ನಿಧನರಾಗಿದ್ದಾರೆ. ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು.
ನಟ ಸರಿಗಮ ವಿಜಯ್(Sarigama Vijay) ಆರೋಗ್ಯದಲ್ಲಿ ಏರುಪೇರಾಗಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು ಎಂದು ಸರಿಗಮ ವಿಜಯ್(Sarigama Vijay) ಪುತ್ರ ರೋಹಿತ್ ತಿಳಿಸಿದ್ದಾರೆ. ಅಂದಹಾಗೆ, 1980ರಲ್ಲಿ ಗೀತಪ್ರಿಯಾ ನಿರ್ದೇಶನದ ಬೆಳವಳದ ಮಡಿಲಲ್ಲಿ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ ನಟಿಸುವುದರ ಮೂಲಕ ನಟನಾಗಿ ಗುರುತಿಸಿಕೊಂಡರು. ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡವರು. ಅದರ ಫಲವೇ 269 ಚಿತ್ರಗಳಲ್ಲಿ ನಟನೆ, 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. ವಿಶೇಷ ಅಂದರೆ, ಇವರ ನಟನೆಯ ಚಿತ್ರಗಳ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ (Tiger Prabhakar)ಚಿತ್ರಗಳೇ ಹೆಚ್ಚಾಗಿದೆ. ಇನ್ನೂ ಅವರು ಸರಿಗಮ ವಿಜಿ ಎಂದೇ ಫೇಮಸ್ ಆಗಿದ್ರು.
ಸರಿಗಮ ವಿಜಿ ಅಭಿನಯಿಸಿದ್ದ ಕೊನೆ ಸಿನಿಮಾ ಡಕೋಟಾ ಪಿಕ್ಚರ್(Cinema Dakota Picture). ಸಂಸಾರದಲ್ಲಿ ಸರಿಗಮ ನಾಟಕ ದಿಂದ ವಿಜಯ್ ಅವರಿಗೆ ಸರಿಗಮ ಹೆಸರು ಬಂತು.. ಸಂಸಾರದಲ್ಲಿ ಸರಿಗಮ ಎಂಬ ನಾಟಕ ಅವರಿಗೆ ಹೆಚ್ಚು ಜನಪ್ರಿಯತೆ ತಂದುಕೊಟ್ಟಿತ್ತು. ಪ್ರಭಾಕರ್ ಜೊತೆ 10 ಸಿನಿಮಾಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.. ಕರ್ನಾಟಕ ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ನಟ ಸರಿಗಮ ವಿಜಯ್ ಈಗ ಇಹಲೋಕ ತ್ಯಜಿಸಿದ್ದಾರೆ.