ರಿಯಾದ್: 56 ಸಾವಿರ ಪಾಕಿಸ್ತಾನಿ ಭಿಕ್ಷುಕರನ್ನು(Pakistani Beggars) ಸೌದಿ ಅರೇಬಿಯಾದಿಂದ (Saudi Arabia) ಹೊರ ಹಾಕಲಾಗಿದೆ ಎಂದು ವರದಿಯಾಗಿದೆ.
ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪಾಕಿಸ್ತಾನಿ ಪ್ರಜೆಗಳ ತಪಾಸಣೆ ಹೆಚ್ಚಿಸಿದ್ದು, ಈ ಭಿಕ್ಷಾಟನೆಯ ದೇಶದ ಅಂತಾರಾಷ್ಟ್ರೀಯ ಪ್ರತಿಷ್ಠೆಗೆ ಹಾನಿ ಮಾಡುತ್ತಿದೆ ಎಂದು ಹೇಳಿದೆ. ಅಲ್ಲದೇ, ಪಾಕ್ ಗೆ ಖಡಕ್ ಎಚ್ಚರಿಕೆಯನ್ನೂ ನೀಡಿದೆ. ಈ ಹಿನ್ನೆಲೆಯಲ್ಲಿ 56 ಸಾವಿರ ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದೆ. ಯುಎಇ ಹೆಚ್ಚಿನ ಪಾಕಿಸ್ತಾನಿ ನಾಗರಿಕರ ಮೇಲೆ ವೀಸಾ ನಿರ್ಬಂಧಗಳನ್ನು ವಿಧಿಸಿದೆ. ಕೆಲವರು ದೇಶಕ್ಕೆ ಬಂದ ನಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಕೂಡ ಕಳವಳ ವ್ಯಕ್ತಪಡಿಸಿದೆ.
ಸೌದಿ ಅರೇಬಿಯಾ ಈ ವರ್ಷ ಭಿಕ್ಷಾಟನೆ ಆರೋಪದ ಮೇಲೆ 24,000 ಪಾಕಿಸ್ತಾನಿಗಳನ್ನು ಗಡಿಪಾರು ಮಾಡಿದಂತಾಗಿದೆ. ದುಬೈನಿಂದ ಸುಮಾರು 6 ಸಾವಿರ ವ್ಯಕ್ತಿಗಳು ಮರಳಿ ಹೋಗಿದ್ದಾರೆ. ಅಜೆರ್ಬೈಜಾನ್ ಸುಮಾರು 2,500 ಪಾಕಿಸ್ತಾನಿ ಭಿಕ್ಷುಕರನ್ನು ಗಡಿಪಾರು ಮಾಡಿದೆ ಎಂದು ವರದಿಯಾಗಿದೆ.
