ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ತಾಯಿ–ಮಗ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪರಪುರುಷನ ಸಹವಾಸವೇ ಆಕೆಗೆ ಮುಳುವುಗಾದಿದ್ದು, ಸಂಭಾಷಣೆ, ವಿಡಿಯೋ ಮುಂದಿಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಲಾಗುತ್ತಿತ್ತು ಎಂಬ ಆರೋಪ ಈಗ ಕೇಳಿ ಬಂದಿದೆ. ಇದರಿಂದಾಗಿ ಮನನೊಂದು ಮಹಿಳೆ ತನ್ನ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿರುವುದಾಗಿ ಕೇಳಿ ಬಂದಿದೆ.
ಹಂಸಲೇಖ (32) ಹಾಗೂ ಆಕೆಯ 8 ವರ್ಷದ ಪುತ್ರ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡವರು. ಮಲ್ಲಿಕಾರ್ಜುನ ಎಂಬಾತನೊಂದಿಗೆ ಹಂಸಲೇಖ ಸಂಪರ್ಕ ಹೊಂದಿದ್ದಳು ಎನ್ನಲಾಗಿದೆ. ಆತ ತನ್ನ ಬಳಿ ಇರುವ ಸಂಭಾಷಣೆಗಳು ಮತ್ತು ವಿಡಿಯೋಗಳನ್ನು ಆಧಾರವಾಗಿ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಹಂಸಲೇಖ, ಮಗನೊಂದಿಗೆ ಮನೆ ತೊರೆದು ಶುಕ್ರವಾರ ಸ್ನೇಹಿತೆಯ ಮನೆಯಲ್ಲಿ ಉಳಿದುಕೊಂಡಿದ್ದಳು.
ಆದರೆ, ಶುಕ್ರವಾರ ಮಗುವಿನೊಂದಿಗೆ ಕೆರೆ ಹಾರಿದ್ದಾಳೆ. ಪ್ರಕರಣದ ಹಿನ್ನೆಲೆ ಪರಿಶೀಲನೆ ನಡೆಸುತ್ತಿರುವ ಪೊಲೀಸರು, ಬ್ಲ್ಯಾಕ್‌ಮೇಲ್ ಆರೋಪದ ಕುರಿತು ತನಿಖೆ ಆರಂಭಿಸಿದ್ದಾರೆ. ಈ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬಿಸಿದ್ದಾರೆ.

