Advertisement

ಡಿ.ಕೆ ಶಿವಕುಮಾರ್ ಒಬ್ಬ ಕಾರ್ಯಕರ್ತ. ಡಿ.ಕೆ ಶಿವಕುಮಾರ್ ಬಲಾಬಲ ಪ್ರದರ್ಶಿಸುವ ವ್ಯಕ್ತಿಯಲ್ಲ. ಕಾಂಗ್ರೆಸ್ ನಲ್ಲಿ ಯಾವುದೇ ಜಗಳ ಇಲ್ಲ. ಈ ಬಗ್ಗೆ ಸಿಎಂ, ವರಿಷ್ಠರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೂ ಯಾಕೆ ಗೊಂದಲ ಅಂತ ಅರ್ಥ ಆಗುತ್ತಿಲ್ಲ ಅಂತಾ ಬಮೂಲ್ ಅಧ್ಯಕ್ಷರಾದ ಡಿಕೆ ಸುರೇಶ್‌ ಹೇಳಿದರು.

ಡಿ.ಕೆ. ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕರ ಬೆಂಬಲ ಇಲ್ಲ ಎಂಬ ಹೇಳಿಕೆ ಪ್ರತಿಕ್ರಿಯಿಸಿದ ಅವರು “ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಶಾಸಕರ ಬೆಂಬಲ ಕೇಳುವ ಸಮಯವಲ್ಲ. ಸಿದ್ದರಾಮಯ್ಯ ಅವರು 2 ವರ್ಷಗಳಿಂದ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರು ಮುಂದುವರಿಯುತ್ತಿರುವಾಗ ಈ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ನಮಗೆ ಗೊತ್ತಿಲ್ಲ. ನೀವು ಈ ವಿಚಾರ ಚರ್ಚೆ ಮಾಡುತ್ತಿರುವವರನ್ನೇ ಕೇಳಿ ಎಂದರು. ಶಿವಕುಮಾರ್ ಅವರದ್ದು ಬಲಾಬಲ ಪ್ರದರ್ಶನ ಮಾಡುವ ವ್ಯಕ್ತಿತ್ವವಿಲ್ಲ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ. ಕಾಂಗ್ರೆಸ್ ವರಿಷ್ಠರಿಗೆ ಗೌರವ ನೀಡುವ ವ್ಯಕ್ತಿತ್ವ ಹೊಂದಿರುವವರು. ಅವರು ಬೇರೆಯವರಿಗೆ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ” ಎಂದರು.

ಡಿ.ಕೆ.ಶಿ ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ ಎಂದು ಡಿ.ಕೆ. ಸುರೇಶ್‌ ಹೇಳಿದರು.

ಇಡಿ ವಿಚಾರಣೆ

ಎರಡು ಬಾರಿ ಇಡಿ ವಿಚಾರಣೆ ಎದುರಿಸಿದ್ದೀರಿ ಅವರ ಉದ್ದೇಶವೇನು ಎಂದು ತಿಳಿಯಿತೇ ಎಂದು ಕೇಳಿದಾಗ, “ನನಗೆ ಕಾರಣ ಗೊತ್ತಿಲ್ಲ. ಆದರೆ ನನಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಮತ್ತೆ ವಿಚಾರಣೆಗೆ ಕರೆದಾಗ ಬರಬೇಕು ಎಂದು ತಿಳಿಸಿದ್ದಾರೆ. ಜವಾಬ್ದಾರಿಯುತ ಪ್ರಜೆಯಾಗಿ ವಿಚಾರಣೆಗೆ ಸಹಕಾರ ನೀಡಲು ಸಿದ್ಧನಿದ್ದೇನೆ” ಎಂದು ತಿಳಿಸಿದರು.

Share.
Leave A Reply