ಲಾಟರಿ ಹೊಡೆದು ಸಿದ್ದರಾಮಯ್ಯ ಸಿಎಂ ಆಗಿ ಬಿಟ್ಟ ಎಂಬ ಹೇಳಿಕೆಯನ್ನು ಬಿ.ಆರ್.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಮುಖ್ಯಮಂತ್ರಿ ಆಗಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಲಾಟರಿ ಸಿಎಂ ಹೇಳಿಕೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬಿಆರ್ ಪಾಟೀಲ್ ಯುಟರ್ನ್ ಹೊಡೆದಿದ್ದಾರೆ. ತಮ್ಮ ಹೇಳಿಕೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ಬಿಟ್ಟು ಬಂದ 8 ಶಾಸಕರಲ್ಲಿ ನಾನು ಒಬ್ಬ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದೇವೆ. ಈ ಪೈಕಿ ಕೆಲವರು ಮಂತ್ರಿಗಳಾಗಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಸಿದ್ದರಾಮಯ್ಯನವರನ್ನು ನಾವು ಸಿಎಂ ಮಾಡಿಲ್ಲ. ಸಿದ್ದರಾಮಯ್ಯಗೆ ಸಾಥ್ ಕೊಟ್ಟು ನಾನು JDS ತೊರೆದೆ ಎಂದು ಹೇಳಿದರು.
ನನ್ನ ಮತ್ತು ಸಿದ್ದರಾಮಯ್ಯನವರ ಸಂಬಂಧ ಉದ್ದೇಶಪೂರ್ವಕವಾಗಿ ಹಾಳು ಮಾಡಲು ವಿಡಿಯೋ ಬಿಡುಗಡೆ ಮಾಡಿ ತೇಜೋವಧೆ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ತನ್ನನ್ನು ಕರೆದೊಯ್ದು ಸೋನಿಯಾ ಗಾಂಧಿವರನ್ನು ಭೇಟಿ ಮಾಡಿಸಿದ್ದು ಅಂತ ವರದಿಯಾಗಿರುವುದು ಶುದ್ಧ ಸುಳ್ಳು, ಶ್ರೀಮತಿ ಗಾಂಧಿಯವರನ್ನು ಭೇಟಿ ಮಾಡಿಸುವಂತೆ ಹಠ ಮಾಡಿದ್ದು ತಾನೇ ಎಂದರು
ಅಪಸ್ವರ ಎದ್ದಿದ್ದಕ್ಕೆ ಸುರ್ಜೇವಾಲಾ ರಾಜ್ಯಕ್ಕೆ ಬಂದಿದ್ದಾರೆ. ಶಾಸಕರ ನೋವು ಏನಿದೆ ಎಂದು ತಿಳಿದುಕೊಳ್ಳಲು ನನ್ನನ್ನು ಕರೆಸಿದ್ದರು. ನಾನು 45 ನಿಮಿಷ ಮಾತನಾಡಿ ಎಲ್ಲಾ ವಿವರ ನೀಡಿದ್ದೇನೆ. ನನ್ನ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದಾರೆ. ಮುಂದೆ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ಎನ್ನುವುದು ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.

