Site icon BosstvKannada

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ, ಐ ಹ್ಯಾವ್‌ ನೋ ಆಪ್ಷನ್‌ ಎಂದಿದ್ದೇಕೆ ಡಿಕೆಶಿ

5 ವರ್ಷವೂ ನಾನೇ ಈ ರಾಜ್ಯದ ಸಿಎಂ ಆಗಿರುತ್ತಾನೆ. ನಿಮಗ್ಯಾಕೆ ಅನುಮಾನ ಬಂದಿದೆ? ಎಂದು ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದಾಗ ಸಿಎಂ ಸಿದ್ದರಾಮಯ್ಯ ಹೇಳಿದರು.

ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ನಂದಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ನನಗೆ ಬೇರೆ ದಾರಿ ಇಲ್ಲ. ನಾನು ಬೆಂಬಲ ನೀಡಲೇಬೇಕು ಮತ್ತು ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶನಗಳನ್ನು ಪಾಲಿಸುವುದಾಗಿ ಹೇಳಿದರು.

ನನಗೆ ಯಾವ ಆಯ್ಕೆ ಇದೆ? ಬೇರೆ ಮಾರ್ಗ ಇಲ್ಲ. ನಾನು ಅವರ ಬೆನ್ನಿಗೆ ನಿಂತು ಬೆಂಬಲಿಸುತ್ತೇನೆ. ಅವರು ಸಿಎಂ ಆಗಿ ಮುಂದುವರೆಯುವುದಕ್ಕೆ ನನಗೆ ಯಾವುದೇ ಆಕ್ಷೇಪವಿಲ್ಲ. ಪಕ್ಷದ ಹೈಕಮಾಂಡ್ ಏನು ಹೇಳುತ್ತದೆ ಅದನ್ನು ಮಾಡುತ್ತೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಹೀಗೆ ಹೇಳುವ ಮೂಲಕ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

Exit mobile version