ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸಿದ್ದಕ್ಕೆ ಯೂಟ್ಯೂಬರ್‌ ಸಮೀರ್‌ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಸಮೀರ್ ಬಾಡಿಗೆ ಮನೆ‌ಗೆ ಧರ್ಮಸ್ಥಳ ಪೊಲೀಸರು ಆಗಮಿಸಿದ್ದಾರೆ. ಆದ್ರೆ ಸಮೀರ್ ಮನೆಯಲ್ಲಿ ಇಲ್ಲಾ, ನಾಪತ್ತೆಯಾಗಿದ್ದಾನೆ ಎನ್ನಲಾಗ್ತಿದೆ.

ಧರ್ಮಸ್ಥಳ ಪ್ರಕರಣದಲ್ಲಿ ಸುಜಾತ ಭಟ್ ಅವರನ್ನ ಮುಂದಿಟ್ಟುಕೊಂಡು ಸುಳ್ಳು ಆರೋಪಗಳನ್ನು ಮಾರುತ್ತಿದ್ದಾರೆಂದು ಆರೋಪಿಸಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳ ಠಾಣೆಯ ಸಬ್ ಇನ್ಸ್‌ಪೆಕ್ಟರ್‌, ಇಬ್ಬರು ಪೊಲೀಸ್ ಸಿಬ್ಬಂದಿ ಸಮೀರ್‌ನನ್ನು ಬಂಧಿಸಲು ಜಿಗಣಿಯ ಹುಲ್ಲಳ್ಳಿಯ ಕ್ರೈಸ್ಟ್ ಕಾಲೇಜು ಪಕ್ಕದಲ್ಲಿರುವ ಮನೆಗೆ ಬಂದಿದ್ದಾರೆ. ಧರ್ಮಸ್ಥಳ ಪೊಲೀಸರಿಗೆ ಬನ್ನೇರುಘಟ್ಟ ಪೊಲೀಸರು ಸಾಥ್‌ ನೀಡಿದ್ದಾರೆ.

ತಾಯಿ, ತಂಗಿ ಜೊತೆ ನೆಲೆಸಿದ್ದ ಸಮೀರ್‌, ಪೊಲೀಸರು ಮನೆಗೆ ಬಂದಾಗ ಆತ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಇಲ್ಲದ ಕಾರಣ ಸಮೀರ್‌ ಬಂದ ತಕ್ಷಣ ತಿಳಿಸುವಂತೆ ಕುಟುಂಬಸ್ಥರಿಗೆ ತಿಳಿಸಿ ಪೊಲೀಸರು ತೆರಳಿದ್ದಾರೆ. ಈಗಾಗಲೇ ಸಮೀರ್‌ಗೆ ಮೂರು ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ಮೂರು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡಿಲ್ಲ.ಹೀಗಾಗಿ ವಾರೆಂಟ್ ಪಡೆದು ಪೊಲೀಸರು ಬಂಧನಕ್ಕೆ ಆಗಮಿಸಿದ್ದರು. ಧರ್ಮಸ್ಥಳ ಕ್ಷೇತ್ರಕ್ಕೆ ಅಪಪ್ರಚಾರ ನಡೆಸಿದ್ದಕ್ಕೆ ರಾಜ್ಯದ್ಯಂತ ಆತನ ವಿರುದ್ಧ ಹಿಂದೂ ಸಂಘಟನೆಗಳು ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಅಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಸಮೀರ್‌ ಅನ್ನು ಬಂಧನ ಮಾಡುವಂತೆ ನೆಟ್ಟಿಗರು ಆಗ್ರಹಿಸುತ್ತಿದ್ದರು.

ಸಮೀರ್‌ ಈಗ ನಾಪತ್ತೆಯಾಗಿದ್ದು, ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ಈಗಾಗಲೇ ಸಮೀರ್‌ಗೆ ಮೂರು ಬಾರಿ ಪೊಲೀಸರು ನೋಟಿಸ್ ನೀಡಿದ್ದರು ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ವಾರೆಂಟ್ ಪಡೆದು ಪೊಲೀಸರು ಬಂಧನಕ್ಕೆ ಆಗಮಿಸಿದ್ದು, ಸಮೀರ್‌ ನಾಪತ್ತೆಯಾಗಿದ್ದಾನೆ ಅನ್ನೋ ಮಾಹಿತಿ ತಿಳಿದು ಬಂದಿದೆ.

Read Also : ಮಹೇಶ್ ತಿಮರೋಡಿಯನ್ನ ವಶಕ್ಕೆ ಪಡೆದ ಪೊಲೀಸರು

Share.
Leave A Reply