ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅದ್ಭುತ ಫಾರ್ಮ್ ನಲ್ಲಿದ್ದು, ತನ್ನ ದಾಖಲೆ ಮುರಿಯುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸ್ಮೃತಿ ಮಂಧಾನ (Smriti Mandhana) ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಲ್ಲಿ ಒಂದೇ ವರ್ಷ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಸ್ಮೃತಿ ಮಂಧಾನ ಮರು ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ 2024 ರಲ್ಲಿ ಸ್ಮೃತಿ ಟಾಪ್ ಸ್ಕೋರರ್ ಆಗಿ ಹೊಹೊಮ್ಮಿದ್ದರು. ಈಗ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. 2024 ರಲ್ಲಿ ಟೆಸ್ಟ್, ಟಿ20 ಮತ್ತು ಏಕದಿನ ಪಂದ್ಯಗಳಲ್ಲಿ ಒಟ್ಟು 35 ಇನಿಂಗ್ಸ್ ಆಡಿದ್ದ ಸ್ಮೃತಿ ಮಂಧಾನ ಒಟ್ಟು 1,659 ರನ್ ಗಳಿಸಿದ್ದ ಸಾಧನೆ ಮಾಡಿದ್ದರು. ಆ ಮೂಲಕ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಂದೇ ವರ್ಷ 1600+ ರನ್ ಕಲೆಹಾಕಿದ ವಿಶ್ವದ ಮೊದಲ ಆಟಗಾರ್ತಿ ಎಂಬ ದಾಖಲೆ ಬರೆದಿದ್ದರು.

ಈಗ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಈ ವರ್ಷ ಇಲ್ಲಿಯವರೆಗೆ 32 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿರುವ ಸ್ಮೃತಿ ಒಟ್ಟು 1703 ರನ್ ಗಳಿಸಿದ್ದಾರೆ. ಆ ಮೂಲಕ ಒಂದೇ ವರ್ಷದಲ್ಲಿ 1700+ ರನ್ ಕಲೆಹಾಕಿದ ವಿಶ್ವದ ಮೊದಲ ಮಹಿಳಾ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1703 ರನ್ಗಳೊಂದಿಗೆ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 10000 ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

Share.
Leave A Reply