Site icon BosstvKannada

10 ಸಾವಿರದ ಗಡಿ ದಾಟಿದ ಸ್ಮೃತಿ ಮಂಧಾನ

ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳ ಮಧ್ಯೆ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವುದರ ಮೂಲಕ ಭಾರತೀಯ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಹೊಸ ಮೈಲುಗಲ್ಲು ಸೃಷ್ಟಿಸಿದ್ದಾರೆ. ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿದೆ. ಆರಂಭಿಕರಾದ ಸ್ಮೃತಿ ಮಂಧಾನ, ಶಫಾಲಿ ವರ್ಮಾ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಲಂಕಾ ವಿರುದ್ಧದ ಮೊದಲ 3 ಪಂದ್ಯಗಳಲ್ಲಿ ಸ್ಮೃತಿ ಉತ್ತಮ ಆಟ ಪ್ರದರ್ಶಿಸಲು ಆಗಿರಲಿಲ್ಲ. ಆದರೆ, ನಾಲ್ಕನೇ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ್ದಾರೆ.

ತಿರುವನಂತಪುರದಲ್ಲಿ ನಡೆಯುತ್ತಿರುವ 4ನೇ ಟಿ20 ಪಂದ್ಯದಲ್ಲಿ ಸ್ಮೃತಿ ಮಂಧಾನ 27 ರನ್ಗಳ ಗಡಿ ದಾಟುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಗಳ ಗಡಿ ದಾಟಿದ್ದಾರೆ. ಈ ಮೂಲಕ ಭಾರತದ ಪರ ಈ ಸಾಧನೆ ಮಾಡಿದ ಎರಡನೇ ಮಹಿಳಾ ಕ್ರಿಕೆಟರ್ ಎನಿಸಿಕೊಂಡಿದ್ದಾರೆ. ಸ್ಮೃತಿಗೂ ಮೊದಲು ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಈ ಸಾಧನೆ ಮಾಡಿದ್ದರು.

ಭಾರತದ ಪರ ಇದುವರೆಗೆ ಏಳು ಟೆಸ್ಟ್‌ ಪಂದ್ಯಗಳನ್ನಾಡಿರುವ ಸ್ಮೃತಿ ಇದರಲ್ಲಿ 629 ರನ್‌ಗಳು ಮತ್ತು 117 ಏಕದಿನ ಪಂದ್ಯಗಳಲ್ಲಿ 5,322 ರನ್‌ ಗಳನ್ನು ಗಳಿಸಿದ್ದಾರೆ. ಟಿ20 ಕ್ರಿಕೆಟ್ನಲ್ಲಿ 4000 ಕ್ಕೂ ಅಧಿಕ ರನ್ ಕಲೆಹಾಕಿರುವ ಸ್ಮೃತಿ ಇದೀಗ ಭಾರತ ಮಹಿಳಾ ಕ್ರಿಕೆಟ್ನಲ್ಲಿ ಐತಿಹಾಸಿಕ ಮೈಲಿಗಲ್ಲು ದಾಟಿದ್ದಾರೆ. ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಮಿಥಾಲಿ ರಾಜ್ ಮೂರು ಸ್ವರೂಪಗಳಲ್ಲಿ 10,868 ರನ್‌ ಕಲೆಹಾಕಿದ್ದಾರೆ. ಸದ್ಯ 10 ಸಾವಿರದ ಗಡಿ ದಾಟಿರುವ ಸ್ಮೃತಿ ಮಂಧಾನ ಮಿಥಾಲಿ ರಾಜ್ ದಾಖಲೆ ಮುರಿಯುವ ಹಂತಕ್ಕೆ ಮುನ್ನುಗ್ಗಿದ್ದಾರೆ. ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ನಾಲ್ಕನೇ ಪಂದ್ಯದಲ್ಲಿ ಸ್ಮೃತಿ 48 ಬೌಲ್ ಎದುರಿಸಿ 80 ರನ್ ಗಳಿಸಿದ್ದಾರೆ.

Exit mobile version