ಬೆಂಗಳೂರು: ಬಿಕ್ಲು ಶಿವ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಗೆ ಸಂಕಷ್ಟ ಶುರುವಾಗಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್‌ (Byrati Basavaraj) ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ. ಅವರ ಲೈವ್‌ ಲೊಕೆಷನ್‌ ಮಹಾರಾಷ್ಟ್ರದ ಪುಣೆಯಲ್ಲಿ ಕೊನೆಯದಾಗಿ ಪತ್ತೆಯಾಗಿದೆ ಎನ್ನಲಾಗಿದೆ. ಸದ್ಯ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ (Belagavi Winter Session) ಬೈರತಿ ಬಸವರಾಜ್, ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಯಾವುದೇ ಕ್ಷಣದಲ್ಲಾದರೂ ಬೈರತಿ ಬಸವರಾಜ್ ಅರೆಸ್ಟ್ ಆಗುವ ಸಾಧ್ಯತೆ ಇದೆ.

Share.
Leave A Reply