ಹಾಸನ: ಬಸ್ ಚಾಲಕನ ದೌರ್ಜನ್ಯದಿಂದಾಗಿ 10ನೇ ತರಗತಿ ವಿದ್ಯಾರ್ಥಿನಿ (SSLC Student) ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.
ಜಿಲ್ಲೆಯ (Hassan) ಚನ್ನರಾಯಪಟ್ಟಣ (Channarayapatna) ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಆಕೆ ಪ್ರತಿ ದಿನ ಶಾಲೆಗೆ ಹೋಗುತ್ತಿದ್ದ ಬಸ್ ನ ಚಾಲಕ ಲೈಂಕಿಗ ದೌರ್ಜನ್ಯ ಎಸಗಿದ್ದಾನೆಂದು ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶಾಲಾ ಬಸ್ ಚಾಲಕ ತಲೆಮರಿಸಿಕೊಂಡಿದ್ದಾನೆ.
ಬಸ್ನಲ್ಲಿರುವ ವಿದ್ಯಾರ್ಥಿನಿಗೆ ಚಾಕೋಲೆಟ್ ನೀಡಿ ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಿಸಿಕೊಂಡಿದ್ದಾನೆ ಎನ್ನಲಾಗಿದೆ. ಎರಡು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ.. ವಾಹನ ಚಾಲಕನಾಗಿದ್ದ ಚನ್ನರಾಯಪಟ್ಟಣ ತಾಲ್ಲೂಕಿನ ಬರಗೂರು ಗ್ರಾಮದ ರಂಜನ್ ಆರೋಪಿ ಎನ್ನಲಾಗಿದ್ದು, ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.
ಬಾಲಕಿ ಮತ್ತು ಮಗುವನ್ನು ಕೆಲ ದಿನಗಳ ಕಾಲ ಆರೈಕೆ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಶೀಘ್ರ ಒಪ್ಪಿಸಲು ಅಧಿಕಾರಿಗಳು ತೀರ್ಮಾನಿಸಿದ್ದು, ರಂಜತ್ ವಿರುದ್ಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲಿಸರು ತನಿಖೆ ನಡೆಸಿದ್ದಾರೆ.
