ಕಾರವಾರ: ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು 5 ವರ್ಷವೂ ನಾನೇ ಸಿಎಂ. ನನ್ನ ಪರವಾಗಿಯೇ ಹೈಕಮಾಂಡ್ ಇದೆ. ನಮ್ಮ ಮಧ್ಯೆ ಯಾವ ಒಪ್ಪಂದವೂ ಆಗಿಲ್ಲ ಎಂಬ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಒಪ್ಪಂದ ಆಗಿದೆ ಎಂಬ ಹೇಳಿಕೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಂದ್ರೆ ಗ್ರಾಮದ ಜಗದೀಶ್ವರಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನನ್ನ ಹಾಗೂ ಸಿದ್ದರಾಮಯ್ಯ (Siddaramaiah) ಮಧ್ಯೆ ಒಪ್ಪಂದ ಆಗಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ. ಹೈಕಮಾಂಡ್(High Command) ಸಿದ್ದರಾಮಯ್ಯ ಪರ ಇರುವುದರಿಂದಲೇ ಅವರು ಸಿಎಂ ಆಗಿದ್ದಾರೆ. ನಾವು ಒಪ್ಪಂದದಂತೆಯೇ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

5 ವರ್ಷದ ಹಿಂದೆ ಈ ಸ್ಥಳಕ್ಕೆ ಬಂದು ಪ್ರಾರ್ಥನೆ ಮಾಡಿದ್ದೆ. ಅದು ಈಗ ಈಡೇರಿದೆ. ಹೀಗಾಗಿ ಬಂದಿದ್ದೇನೆ. ಮುಂದೆಯೂ ಬರುತ್ತೇನೆ. ತಾಯಿ ಆಶೀರ್ವಾದ ಮಾಡು ಎಂದು ಕೇಳಿದ್ದೇನೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಶಕ್ತಿ ದೇವತೆಯಾಗಿರುವ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Share.
Leave A Reply