Site icon BosstvKannada

ಕುವೆಂಪುರವರಿಗೆ ಭಾರತ ರತ್ನ ನೀಡುವಂತೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಶಿಫಾರಸು

ಕನ್ನಡದ ಇಬ್ಬರು ಮಹನೀಯರಿಗೆ ಸರ್ಕಾರ ಪ್ರಶಸ್ತಿ ಘೋಷಿಸಿರೋದಕ್ಕೆ ಅಭಿಮಾನಿಗಳು ಫುಲ್‌ ಖುಷಿಯಾಗಿದ್ದಾರೆ. ಸೆಪ್ಟೆಂಬರ್‌ 18ರಂದು ದಾದಾ ಹುಟ್ಟುಹಬ್ಬ ಇರುವ ಬೆನ್ನಲ್ಲೇ ಈ ರೀತಿಯ ಸಂತಸದ ಸುದ್ದಿ ಹೊರಬಿದ್ದಿದೆ. ಇದರ ಜೊತೆಗೆ ರಾಷ್ಟ್ರಕವಿ ಕುವೆಂಪುರವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.

ಇನ್ನೂ ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರಣೋತ್ತವರಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ಈ ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣು ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಯಿತು. ಆ ಘಟನೆಯನ್ನು ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ವಿಷ್ಣುವರ್ಧನ್ ಪುಣ್ಯಭೂಮಿಯನ್ನು ಮತ್ತೆ ಪಡೆಯಲು ಅಭಿಮಾನಿಗಳು ಸರ್ಕಾರಕ್ಕೆ ಒತ್ತಾಯ ಹೇರಿದ್ದಾರೆ.

ಇನ್ನು ಅಭಿಮಾನ್‌ ಸ್ಟುಡಿಯೋ ವಿವಾದ ಬೇಗನೆ ಅಂತ್ಯವಾಗಲಿ. ಮತ್ತೆ ವಿಷ್ಣು ವರ್ಧನ್‌ ಅವರ ಸ್ಮಾರಕ ನಿರ್ಮಾಣವಾಗಲಿ ಅನ್ನೋದು ಅಭಿಮಾನಿಗಳ ಆಶಯ.

Read Also : ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ : ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ಸ್ಯಾಂಡಲ್‌ವುಡ್‌ ನಟಿಯರು

Exit mobile version