ಬೀದರ್: ವಿದ್ಯಾರ್ಥಿನಿಯೋರ್ವಳು ತಾನೇ ಪ್ರತಿದಿನ ಶಾಲೆಗೆ ತೆರಳುತ್ತಿದ್ದ ಬಸ್ ಗೆ ಸಿಲುಕಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಈ ಘಟನೆ ಜಿಲ್ಲೆಯ (Bidar) ಜನವಾಡ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಬಾಲಕಿ (School Girl) ರುತ್ವಿ ಸಾವನ್ನಪ್ಪಿರುವ ದುರ್ದೈವಿ. ಬಾಲಕಿ ರುತ್ವಿ ಜನವಾಡದಲ್ಲಿರುವ ಗುರುನಾನಕ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದಳು. ರುತ್ವಿ ಗಡಿಕುಶನೂರು ಗ್ರಾಮದವಳು ಎನ್ನಲಾಗಿದೆ. ಡಿ. 9ರಂದು ಶಾಲೆ ಮುಗಿದ ನಂತರ ಮನೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಶಾಲೆಯಿಂದ ಮನೆಗೆ ಹೋಗಬೇಕು ಎನ್ನುವಷ್ಟರಲ್ಲಿ ಗಡಿಕುಶನೂರು ಗ್ರಾಮದ ರುತ್ವಿ ಬಸ್ ಇಳಿದು ನಿಂತಿದ್ದನ್ನು ಗಮನಿಸದ ಡ್ರೈವರ್ ಮುಂದಕ್ಕೆ ವಾಹನ ಚಲಾಯಿಸಿದ್ದಾನೆ. ಆ ವೇಳೆ ವಾಹನದ ಹಿಂದಿನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾಳೆ.

ಬಸ್ ಚಾಲಕ ಚಾಲಕ, ಗುರುನಾನಕ್ ಶಾಲೆಯಿಂದ ಮನೆಯ ವರೆಗೂ ಡ್ರಾಪ್ ಮಾಡಿದ್ದ. ಬಾಲಕಿ ಸ್ಕೂಲ್ ಬಸ್ ಇಳಿದು ಪಕ್ಕದಲ್ಲೇ ನಿಂತಿರುವುದನ್ನು ಗಮನಿಸದೆ ಚಲಾಯಿಸಿದ್ದ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share.
Leave A Reply