ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಈ ಕುರಿತು ಬಿಎಂಆರ್ ಸಿಎಲ್ ಅಧಿಕೃತವಾಗಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಬೆಳಗ್ಗೆ ನೇರಳೆ ಮಾರ್ಗದಲ್ಲಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮೆಟ್ರೋ ರೈಲುಗಳು ಪ್ರಸ್ತುತ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಕೆಂಗೇರಿ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಮೈಸೂರು ರಸ್ತೆ ಮತ್ತು ಚಲ್ಲಘಟ್ಟ ನಡುವಿನ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಹೀಗಾಗಿ ಪಂತರಪಾಳ್ಯ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್, ಕೆಂಗೇರಿ, ಛಲ್ಲಘಟ್ಟ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಪರಿಸ್ಥಿತಿ ಸರಿಯಾದ ನಂತರ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಎಂದು ಹೇಳಿದೆ.

Share.
Leave A Reply