ಮುಡಾ ಹಗರಣದ ತನಿಖೆಗೆ ಎಂಟ್ರಿಯಾಗಿದ್ದ ಇಡಿಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ.. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ, ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಸಿಜೆಐ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಇಚ್ಛಿಸುವುದಿಲ್ಲ ಅಂತಾ ಸ್ಪಷ್ಟಪಡಿಸಿತು.
ಅಲ್ಲದೇ, ಇಡಿ ಕಾರ್ಯವಿಧಾನ ಪ್ರಶ್ನಿಸಿದ ಕೋರ್ಟ್, ಮತದಾರರ ನಡುವೆ ರಾಜಕೀಯ ಹೋರಾಟ ನಡೆಸಲಿ, ಅದಕ್ಕಾಗಿ ನಿಮ್ಮನ್ನು ಏಕೆ ಬಳಸಿಕೊಳ್ಳಲಾಗುತ್ತಿದೆ? ಅಂತಾ ಕ್ಲಾಸ್ ತೆಗೆದುಕೊಂತು. ಅಲ್ಲದೇ, ನಮ್ಮನ್ನು ಬಾಯಿ ತೆರೆಯಲು ಬಿಡಬೇಡಿ. ಇಲ್ಲದಿದ್ರೆ ಇಡಿ ಬಗ್ಗೆ ನಾವು ಕಠಿಣವಾಗಿ ಟೀಕೆ ಮಾಡಬೇಕಾಗುತ್ತದೆ ಅಂತಾ ಎಚ್ಚರಿಕೆ ನೀಡಿ ಅರ್ಜಿಯನ್ನು ವಜಾಗೊಳಿಸಿತು.. ಅಲ್ಲದೇ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿರುದ್ಧವೂ ಹೂಡಲಾದ ಹಣ ವರ್ಗಾವಣೆ ಪ್ರಕರಣವನ್ನು ನ್ಯಾಯಾಲಯ ರದ್ದು ಪಡಿಸಿದೆ. ಇನ್ನು, ಮುಡಾದಿಂದ ಅಕ್ರಮವಾಗಿ ನಿವೇಶನಗಳನ್ನು ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನೀಡಿರುವ ಸಮನ್ಸ್‌ನ್ನ ರದ್ದುಪಡಿಸಿ ಹೈಕೋರ್ಟ್ ಮಾರ್ಚ್ 7 ರಂದು ಆದೇಶಿಸಿತ್ತು..

