Site icon BosstvKannada

ಮದ್ದೂರಲ್ಲಿ ಉದ್ವಿಗ್ನ ಸ್ಥಿತಿ: ನಾಳೆವರೆಗೂ ನಿಷೇಧಾಜ್ಞೆ ಜಾರಿ!

ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆವರೆಗೆ ಮದ್ದೂರು ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಘಟನಾ ನಡೆದ ಸ್ಥಳಕ್ಕೆ ರಾತ್ರಿಯೇ ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ರೌಂಡ್‌ ಹಾಕಿದರು. ಇಂದು ಬೆಳಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ ಮಂಗಳವಾರ ಬೆಳಗ್ಗೆಯವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಮದ್ದೂರು ಪಟ್ಟಣದ ಜಾಮಿಯಾ ಮಸೀದಿ ಬಳಿ ಪ್ರತಿಭಟನಾ ಮೆರವಣಿಗೆ ವೇಳೆ ಯುವಕರು ಗಣೇಶ ವಿಸರ್ಜನೆ ಮಾಡಲು ಮೆರವಣಿಗೆ ಮಾಡಿದ್ದಾರೆ. ರಾಮ್ ರಹೀಮ್ ನಗರದಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಕಲ್ಲು ಬಿದ್ದಿದೆ. ನಂತರ ಎರಡೂ ಕಡೆಯಿಂದ ಕಲ್ಲು ತೂರಾಟ ಆಗಿದೆ. ಲೈಟ್ ಆಫ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು. 21 ಜನರನ್ನು ವಶಕ್ಕೆ ಪಡೆದಿದ್ದೇವೆ. ವಶಕ್ಕೆ ಪಡೆದವರ ಪೈಕಿ ಇಬ್ಬರು ಮಾತ್ರ ಚನ್ನಪಟ್ಟಣದವರು ಉಳಿದವರು ಸ್ಥಳೀಯರಾಗಿದ್ದಾರೆ. ಸದ್ಯ ಬಿಗಿ ಭದ್ರತೆ ಮಾಡಿದ್ದೇವೆ ಎಂದು ಹೇಳಿದರು. ಇಬ್ಬರು ಸಿಬ್ಬಂದಿಗೆ ಸಹ ಏಟು ಬಿದ್ದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ ಇದ್ದ ಕಾರಣ ಪರಿಸ್ಥಿತಿಯನ್ನು ಹತೋಟಿಗೆ ತರಲಾಗ್ತಿದೆ ಎಂದು ಹೇಳಿದರು.

Read Also : ಗಣೇಶ ಮೆರವಣಿಗೆ ವೇಳೆ ಅನ್ಯಕೋಮಿಗರಿಂದ ಕಲ್ಲು ತೂರಾಟ..!

Exit mobile version