Site icon BosstvKannada

ಭೀಕರ ಅಪಘಾತ: ಮೂವರು ಬಲಿ

ಮಂಡ್ಯ: ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ನಾಗತಿಹಳ್ಳಿ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದವರನ್ನು ಚಿಕ್ಕಮಗಳೂರು (Chikkamagaluru) ಮೂಲದ ಚನ್ನೆಗೌಡ (60), ಸರೋಜಮ್ಮ (55), ಜಯಮ್ಮ (70) ಎಂದು ಗುರುತಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್ ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಕಾರು ಪಲ್ಟಿಯಾಗಿದೆ.

ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕಾರು ತೆರಳುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ತಿರುವಿನಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿ ಮೂವರಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version