ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್‌ಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಇಂದು ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಪಾರ್ಟಿಯವರು ಏನು ಹೇಳಿದ್ದಾರೆ ಅಂತ ಈಗಾಗಲೇ ಸಿಎಂ ಅವರೇ ಉಲ್ಲೇಖಿಸಿದ್ದಾರೆ. ನಾನು ಮುಖ್ಯಮಂತ್ರಿಗಳ ಹೇಳಿಕೆಯನ್ನ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ . ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಸಿಎಂ ಅವರೇ ಉತ್ತರಿಸಿದ್ದಾರೆ . ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ” ಎಂದು ಹೇಳಿದರು.

ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ? ಅಧಿಕಾರ ಪವರ್‌ ಶೇರಿಂಗ್ ಬಗ್ಗೆ ನಮಗೆ ಗಾಬರಿ ಇಲ್ಲ ನಿಮಗೆ ಯಾಕೆ ಗಾಬರಿ ಎಂದು ಮಾಧ್ಯಮಗಳನ್ನೇ ಪ್ರಶ್ನಿಸಿದರು.

ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂಬ ಆಸೆ ಅನೇಕರಿಗೆ ಇರುತ್ತದೆ ಎಂದು ಕೇಳಿದಾಗ, “ನಿಮ್ಮಲ್ಲೂ ಅನೇಕರಿಗೆ ಅನೇಕ ಆಸೆ ಇರುತ್ತವೆ. ನಾನು ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಅವಶ್ಯಕತೆ ಇಲ್ಲ. ಯಾರು ಏನೇನು ಮಾತನಾಡಿದ್ದಾರೆ, ಅವರೇ ಪ್ರಶ್ನೆ ಉತ್ತರ ಎಲ್ಲವನ್ನು ನೀಡಿದ್ದಾರೆ. ಸಧ್ಯಕ್ಕೆ ನಾನು ಯಾವುದೇ ಉತ್ತರ ನೀಡುವುದಿಲ್ಲ” ಎಂದು ತಿಳಿಸಿದರು.

Share.
Leave A Reply