ಬೆಳಗಾವಿ: ರಾಜ್ಯದಲ್ಲಿ ಬಿಯರ್ ಪ್ರಿಯರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಹೌದು. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಈ ವೇಳೆ ಅಬಕಾರ ಸಚಿವ ಆರ್.ಬಿ. ತಿಮ್ಮಾಪುರ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ಮೊದಲ ದಿನದ ಕಲಾಪದಲ್ಲಿ ಎಂಎಲ್ ಸಿ ಎನ್. ರವಿಕುಮಾರ್ ಅವರು ಸರ್ಕಾರದ ಮುಂದೆ ಪ್ರಶ್ನಿಯೊಂದನ್ನು ಇತ್ತರು. ಸರ್ಕಾರಕ್ಕೆ ಮದ್ಯ ಮಾರಾಟದಿಂದ ಹೆಚ್ಚು ಆದಾಯ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಮದ್ಯ ಪ್ರಿಯರ ಆರೋದ್ಯದ ರಕ್ಷಣೆಗಾಗಿ ಶೇ. 20ರಷ್ಟು ಹಣ ಮೀಸಲಿಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಬಿಜೆಪಿ ಸದಸ್ಯರೂ ಜೊತೆಯಾಗಿ ಧ್ವನಿ ಗೂಡಿಸಿದರು. ಈ ವೇಳೆ ಸಚಿವರು ಅಂಕಿ-ಅಂಶ ಸಮೇತ ಮಾಹಿತಿ ನೀಡಿದರು.
ಮದ್ಯಸೇವನೆ ಮಾಡುವವರಿಗೆ ಪ್ರತ್ಯೇಕವಾಗಿ ಅನುದಾನ ಇಡುವುದಕ್ಕೆ ಆಗುವುದಿಲ್ಲ. ಮದ್ಯ ಮಾರಾಟದಿಂದ ಸಂಗ್ರಹವಾಗುವ ಹಣ ಆರೋಗ್ಯ ಇಲಾಖೆಗೂ ಹೋಗುತ್ತದೆ. ಹಲವಾರು ಆರೋಗ್ಯ ಯೋಜನೆಗಳನ್ನು ಜಾರಿಯಲ್ಲಿರುವುದರಿಂದ ಎಲ್ಲರಿಗೂ ಆರೋಗ್ಯ ಸೇವೆ ಲಭಿಸುತ್ತದೆ. ಹೀಗಾಗಿ ಪ್ರತ್ಯೇಕವಾಗಿ ಹಣ ಮೀಸಲು ಇಡಲು ಆಗುವುದಿಲ್ಲ ಎಂದು ಲಿಖಿತವಾಗಿ ಉತ್ತರ ನೀಡಿದರು.
ರಾಜ್ಯದಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ 195 ಲಕ್ಷ ಕೇಸ್ ಬಿಯರ್ ಮಾರಾಟವಾಗಿ ಎನ್ನಲಾಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಕೆ ಮಾಡಿದರೆ ಶೇ. 19.55ರಷ್ಟು ಮಾರಾಟ ಬೆಳವಣಿಗೆ ಕುಂಠಿತವಾಗಿದೆ. ರಾಜ್ಯದಲ್ಲಿ ಹೆಚ್ಚಿನ ಮಳೆಯಿಂದ ಶೀತ ವಾತಾವರಣದ ಕಾರಣ ಬಿಯರ್ ಮಾರಾಟದಲ್ಲಿ ಕೂಡ ಕುಸಿತವಾಗಿರಬಹುದು ಎಂದು ಅಂದಾಜಿಸಲಾಗಿದೆ.

