ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಮುಡಾ ಹಗರಣ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಕುರ್ಚಿಗೂ ಕಂಟಕವಾಗಿ ಪರಿಣಮಿಸಿತ್ತು. ಸದ್ಯ ಈ ಪ್ರಕರಣದ ತನಿಖೆ ಕೈಗೊಂಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆಲವು ರಹಸ್ಯಗಳನ್ನು ಹೊರಗೆ ಹಾಕಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿ, 22.47 ಕೋಟಿ ರೂ. ಲಂಚ ಪಡೆದಿದ್ದರು ಎಂಬುವುದು ತನಿಖೆಯಿಂದ ಹೊರ ಬಂದಿದೆ ಎಂದು ವರದಿಯಾಗುತ್ತಿದೆ.

ಸುಮಾರು 700 ಕೋಟಿ ರೂ. ಮೌಲ್ಯದ 1,095 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ ಎಂಬುವುದು ತನಿಖೆಯಿಂದ ಹೊರ ಬಂದಿದೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಹಗರಣದ ಪ್ರಮುಖ ರೂವಾರಿ ಎಂಬುವುದು ತನಿಖೆಯಿಂದ ಗೊತ್ತಾಗಿದೆ ಎಂದು ದಿ ನ್ಯೂ ಇಂಡಿಯನ್ಸ ಎಕ್ಸೆಪ್ರೆಸ್ ತನ್ನ ವರದಿಯಲ್ಲಿ ಹೇಳಿದೆ.

Share.
Leave A Reply