ಮಂಡ್ಯ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಇದೇ ತಿಂಗಳು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಪ್ರಧಾನಿ ಮೋದಿ ಫೆ.23ಕ್ಕೆ ಆದಿಚುಂಚನಗಿರಿಗೆ (Adichunchanagiri) ಭೇಟಿ ನೀಡುತ್ತಿದ್ದಾರೆ. ಮಂಡ್ಯ (Mandya) ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಿ, ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ನಂತರ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ.
ಅಂದು ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮಠದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.
