ಕನ್ನಡ ಸಿನಿ ಪ್ರೇಕ್ಷಕರ ಬಹು ವರ್ಷಗಳ ಬೇಡಿಕೆ.. ಮೇರುನಟ, ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳ ಹಂಬಲಕ್ಕೆ ಕೊನೆಗೂ ಸುಖಾಂತ್ಯ ಸಿಕ್ಕಿದೆ.. ಕನ್ನಡ ಮಣ್ಣಿನ ಹೆಮ್ಮೆಯ ಪುತ್ರ ಡಾ. ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇತ್ತೀಚೆಗೆ ವಿಷ್ಣು ಸ್ಮಾರಕ ವಿಚಾರವಾಗಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿತ್ತು.
ಸ್ಮಾರಕ ತೆರವಾಗಿದ್ದಕ್ಕೆ ಅಭಿಮಾನಿಗಳು ಕಿಡಿಕಾರಿದ್ರು.. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಸ್ಮಾರಕ ಮರುಸ್ಥಾಪನೆಗೆ ವಿಷ್ಣು ಕುಟುಂಬ ಸರ್ಕಾರಕ್ಕೆ ಮನವಿ ಮಾಡಿತ್ತು. ಜೊತೆಗೆ ಅಭಿಮಾನಿಗಳ ಆಸೆಯಂತೆ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಬೇಡಿಕೆ ಇಡಲಾಗಿತ್ತು.. ಇದೀಗ ಸರ್ಕಾರ ದಾದಾಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದೆ.
ಮತ್ತೊಂದು ಕಡೆ ಕನ್ನಡ ಹಿರಿಯ ನಟಿ, ಬಹುಭಾಷಾ ತಾರೆ ಬಿ.ಸರೋಜಾ ದೇವಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ.. ಕನ್ನಡದ ಇಬ್ಬರು ಮಹನೀಯರಿಗೆ ಸರ್ಕಾರ ಪ್ರಶಸ್ತಿ ಘೋಷಿಸಿರೋದಕ್ಕೆ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.. ಸೆಪ್ಟೆಂಬರ್ 18ರಂದು ದಾದಾ ಹುಟ್ಟುಹಬ್ಬ ಇರುವ ಬೆನ್ನಲ್ಲೇ ಈ ರೀತಿಯ ಸಂತಸದ ಸುದ್ದಿ ಹೊರಬಿದ್ದಿದೆ.. ಇದರ ಜೊತೆಗೆ ರಾಷ್ಟ್ರಕವಿ ಕುವೆಂಪುರವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿರೋದು ಮತ್ತೊಂದು ಖುಷಿಯ ವಿಚಾರ.
Read Also : ಸಾಹಸ ಸಿಂಹ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ!

