
ಕನ್ನಡ ರಂಗಭೂಮಿ ಹಾಗೂ ಚಿತ್ರರಂಗಕ್ಕೆ ದೊಡ್ಡ ಆಘಾತ ಎದುರಾಗಿದೆ. ರಾಜ್ಯದ ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಖ್ಯಾತ ನಾಟಕಕಾರ ಹಾಗೂ ಸಾಮಾಜಿಕ ಚಿಂತಕ ಶ್ರೀ ಯಶವಂತ ಸರದೇಶಪಾಂಡೆ ಅವರು ಉತ್ತರ ಕರ್ನಾಟಕ ಭಾಷೆ ಶೈಲಿಯಲ್ಲಿ ಅನೇಕ ನಾಟಕಗಳನ್ನು ರಚಿಸಿ, ಅಭಿನಯಿಸಿದ್ದಾರೆ. ಯಶವಂತ ಸರದೇಶಪಾಂಡೆ ಕಲೆ ಹಾಗೂ ರಂಗಭೂಮಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಜರಾಮರ. ಕಮಲ್ ಹಾಸನ್ ಹಾಗೂ ರಮೇಶ್ ಅಭಿನಯದ ರಾಮ ಶಾಮ ಭಾಮ ಚಿತ್ರದ ಉತ್ತರ ಕರ್ನಾಟಕದ ಸಂಭಾಷಣೆಯಿಂದ ಯಶವಂತ ಸರದೇಶಪಾಂಡೆ ಜನಪ್ರಿರಾಗಿದ್ದರು. ಕನ್ನಡದ ಹಲವು ಚಿತ್ರಗಳಲ್ಲಿ ಕಾಮಿಡಿ ನಟರಾಗಿ ನಟಿಸಿದ್ದರು. ಇಂದು ಬೆಳಿಗ್ಗೆ ಧಾರವಾಡದಿಂದ ಬೆಂಗಳೂರಿಗೆ ಬಂದಿದ್ದ ಸರದೇಶಪಾಂಡೆ, ಎದೆ ನೋವು ಕಾಣಿಸಿಕೊಂಡ ಕಾರಣ ಬನ್ನೇರುಘಟ್ಟ ಬಳಿಯ fortis ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿ ಆಗದೆ ವಿಧಿವಶರಾಗಿದ್ದಾರೆ.
ಇನ್ನೂ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ.. ಖ್ಯಾತ ಕನ್ನಡ ರಂಗಭೂಮಿ ನಟ, ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ, ನಮ್ಮ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ನಿಧನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಅವರ ʼಆಲ್ ದಿ ಬೆಸ್ಟ್ʼ ನಾಟಕ ಅಭೂತಪೂರ್ವ ಯಶಸ್ಸು ಕಂಡಿತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿಯೂ ಇವರು ಪಾತ್ರವಹಿಸುತ್ತಿದ್ದರು ಅಂತ ಸಂತಾಪ ಸೂಚಿಸಿದ್ದಾರೆ..
Read Also : ಮುಟ್ಟಿದರೆ ಮುನಿ ಆರೋಗ್ಯಕ್ಕೆ ಸಂಜೀವಿನಿ! : ಅಸಂಖ್ಯಾತ ಪ್ರಯೋಜನಗಳಿಂದ ಕೂಡಿದೆ ಮುಟ್ಟಿದರೆ ಮುದುಡುವ ಈ ಸಸ್ಯ!