Site icon BosstvKannada

ಧರ್ಮಸ್ಥಳ ಪ್ರಕರಣದ ಹಿಂದೆ ಸಮಾಜಘಾತಕ ಶಕ್ತಿಗಳ ಕುತಂತ್ರವಿದೆ -ಬಿ.ವೈ ವಿಜಯೇಂದ್ರ

ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದೇವೆ ಎಂದು ತಿಳಿಸಿದರು. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗುಂಪು ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಈ ಭೇಟಿಯ ಉದ್ದೇಶ ಮಂಜುನಾಥೇಶ್ವರ ದೇವರ ದರ್ಶನ ಪಡೆಯುವುದು ಎಂದು ವಿಜಯೇಂದ್ರ ಹೇಳಿದ್ದಾರೆ.

ಆದರೆ, ಧರ್ಮಸ್ಥಳದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಎಸ್ಐಟಿ ತನಿಖೆ ಮತ್ತು ಅದರ ಸುತ್ತಮುತ್ತಲಿನ ರಾಜಕೀಯ ಚರ್ಚೆಗಳ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡ್ತಿದ್ದಾರೆ ಅಂತಾ ಹೇಳಲಾಗ್ತಿದೆ. ಎಸ್ಐಟಿ ತನಿಖೆ ಶೀಘ್ರವಾಗಿ ಮುಗಿಯಬೇಕು ಮತ್ತು ಸತ್ಯ ಬಹಿರಂಗಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಈ ತನಿಖೆಯ ಹಿಂದೆ ಕೆಲವು ಸಮಾಜಘಾತಕ ಶಕ್ತಿಗಳು ಕುತಂತ್ರ ನಡೆಸುತ್ತಿವೆ ಎಂಬ ಚರ್ಚೆಗಳಿಗೆ ಪ್ರತಿಕ್ರಿಯಿಸುವ ಸಂಕೇತವಾಗಿ ಈ ಭೇಟಿ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.

Exit mobile version