Site icon BosstvKannada

‘ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ, ಪದೇ ಪದೇ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ’

ಡಿಸಿಎಂ ಡಿಕೆ ಶಿವಕುಮಾರ್ ಗೆ ಕೆಲವು ಶಾಸಕರ ಬೆಂಬಲ ಇದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಹಾಗೂ ಮಾಜಿ ಸಂಸದ ಡಿ.ಕೆ ಸುರೇಶ್, ಸದ್ಯದ ಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳೋದು ಸರಿಯಲ್ಲ ಎಂದಿದ್ದಾರೆ.

ಐದು ವರ್ಷ ಸಿಎಂ ಬದಲಾವಣೆ ಇಲ್ಲ. 2028ರಲ್ಲೂ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎಂಬ ಹೇಳಿಕೆ ಕುರಿತು ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಸುರೇಶ್, ರಾಜಕಾರಣದಲ್ಲಿ ನಿವೃತ್ತಿ ಅನ್ನೋ ವಿಚಾರವೇ ಇಲ್ಲ. ಡಿಕೆ ಶಿವಕುಮಾರ್ ಸದ್ಯ ಕೆಪಿಸಿಸಿ ಅಧ್ಯಕ್ಷರು ಆಗಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಶಾಸಕರ ಬೆಂಬಲ ಕೇಳೋದು ಸರಿಯಲ್ಲ ಈಗ ಸಿದ್ದರಾಮಯ್ಯ ಸಿಎಂ ಆಗಿ ಕೆಲಸ ಮಾಡತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ.

ಡಿಕೆ ಶಿವಕುಮಾರ್‌ ಪ್ರಾಮಾಣಿಕ ಪಕ್ಷದ ಕಾರ್ಯಕರ್ತ

ಡಿಕೆ ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ” ಎಂದರು.

ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ

ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು” ಎಂದು ತಿಳಿಸಿದರು.

Exit mobile version