ಕಲಬುರಗಿ: ಸರಣಿ ಅಪಘಾತಕ್ಕೆ ಮೂವರು ಬಲಿಯಾಗಿರುವ ಘಟನೆ ನಡೆದಿದೆ.
ಎರಡು ಸಾರಿಗೆ ಬಸ್ ಹಾಗೂ ಜೀಪ್ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಮೂವರು ಬಲಿಯಾಗಿದ್ದಾರೆ. ಈ ಘಟನೆ ಕಲಬುರಗಿಯ ಸಂಚಾರಿ ಠಾಣೆ 1ರ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಪತಿ, ಪತ್ನಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸುಲೋಚನಾ(70), ಚಂದ್ರಕಾಂತ್ (82) ಮತ್ತು ಚಾಲಕ ಮಿಟ್ಟೆಸಾಬ್(35) ಸಾವನ್ನಪ್ಪಿದ ದುರ್ದೈವಿಗಳು. ಅಲ್ಲದೇ, ಮೂವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
