Site icon BosstvKannada

ಭೀಕರ ಅಪಘಾತ; ಮೂವರು ಯುವಕರ ದಾರುಣ ಅಂತ್ಯ

ಕೊಪ್ಪಳ: ಭೀಕರ ಅಪಘಾತಕ್ಕೆ ಮೂವರು ಯುವಕರು ಬಲಿಯಾಗಿರುವ ಘಟನೆಯೊಂದು ನಡೆದಿದೆ.

ಈ ಘಟನೆ ಕೊಪ್ಪಳ (Koppal) ತಾಲೂಕಿನ ಇಂದರಗಿ ಗ್ರಾಮದ ಹತ್ತಿರ ನಡೆದಿದೆ. ಬೈಕ್‌ ಹಾಗೂ ಬುಲೆರೋ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಕೊಪ್ಪಳ ತಾಲೂಕಿನ ಹೊಸಹಳ್ಳಿ ಗ್ರಾಮದ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್, ಗಂಗಾವತಿ ತಾಲೂಕಿನ ಶ್ರೀರಾಮನಗರದ ಆಸೀಫ್‌ ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ.

ಮೂವರೂ ಯುವಕರು ಬೈಕ್ ನಲ್ಲಿದ್ದರು ಎನ್ನಲಾಗಿದೆ. ಬೈಕ್ ನಲ್ಲಿ ಶ್ರೀರಾಮನಗರದಿಂದ ಹೊಸಹಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆಯುತ್ತಿದ್ದಾರೆ. ಬುಲೆರೋ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Exit mobile version