ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಟೈರ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಸಿಂಗಸಂದ್ರದಲ್ಲಿ ನಡೆದಿದೆ. ಬಿಎಂಟಿಸಿ ಬಸ್ ಇಂದು ಬೆಳಗ್ಗೆ ಅತ್ತಿಬೆಲೆಯಿಂದ ಮೆಜೆಸ್ಟಿಕ್ ಕಡೆ ಹೋಗುತ್ತಿತ್ತು. ಆ ಸಂದರ್ಭದಲ್ಲಿ ಬಸ್ ನ ಟೈರ್ ಸ್ಫೋಟಗೊಂಡಿದೆ. ಇದರಿಂದ ಬಸ್‌ನ ಟೈರ್ ಬಳಿಯ ಸೀಟ್‌ಗೂ ಹಾನಿಯಾಗಿದೆ. ಅಲ್ಲದೇ ಕೆಳಭಾಗದಲ್ಲಿ ಬಸ್ ಸಂಪೂರ್ಣವಾಗಿ ಛಿದ್ರಗೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದಂತಾಗಿದೆ. ಸ್ಫೋಟದಿಂದ ಉಂಟಾದ ಶಬ್ದದಿಂದಾಗಿ ಜನರು ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
