Site icon BosstvKannada

ಮಹೇಶ್ ಶೆಟ್ಟಿ ಯಾವ ಜಿಲ್ಲೆಗೆ ಗಡಿಪಾರಾಗಿದ್ದು?

ಮಂಗಳೂರು: ಗಡಿಪಾರು ಶಿಕ್ಷೆಗೆ ಒಳಗಾಗಿರುವ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ರಾಯಚೂರು ಜಿಲ್ಲೆಯ ಮಾನ್ವಿ (Manvi)ಗೆ ಗಡಿಪಾರಾಗಿದ್ದಾರೆ. ಈ ಕುರಿತು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹಿಂದೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದನ್ನು ತಿಮರೋಡಿ ಹೈಕೋರ್ಟ್‌ನಲ್ಲಿ(High Court) ಪ್ರಶ್ನಿಸಿದ್ದರು. ಹೈಕೋರ್ಟ್ (High Court) ಅರ್ಜಿಯನ್ನು ಮರು ಪರಿಶೀಲಿಸಿತ್ತು. ಅರ್ಜಿ ಆದೇಶ ಮರುಪರಿಶೀಲನೆ ಮಾಡಿ ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಡಿ.17ರಂದು ಆದೇಶ ಹೊರಡಿಸಲಾಗಿದೆ.

ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದಿದೆ. ಈ ಸಂದರ್ಭದಲ್ಲಿ ಅವರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಪೊಲೀಸರು ಮನೆಗೆ ಹೋಗಿ ನೋಟಿಸ್‌ ಅಂಟಿಸಿ ಬಂದಿದ್ದಾರೆ. ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿತ್ತು. ಇದನ್ನೇ ಮಹೇಶ್ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

Exit mobile version