ಬೆಂಗಳೂರು: ಮುಡಾ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಇಂದು ಮಹತ್ವದ ದಿನವಾಗಿದೆ.

ಮುಡಾ ಹಗರಣ (MUDA Scam) ಪ್ರಕರಣದಲ್ಲಿ ಲೋಕಾಯುಕ್ತ (Lokayukta) ಕ್ಲೀನ್‌ ಚಿಟ್‌ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ತೀರ್ಪು ನೀಡಲಿದೆ.

ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿಯ ವಾದ- ಪ್ರತಿವಾದ ಆಲಿಸಿದ ಕೋರ್ಟ್, ಆದೇಶ ಪ್ರಕಟಿಸಿತ್ತು. ಇಂದು ಆದೇಶ ಪ್ರಕಟವಾಗಲಿದ್ದು, ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗುತ್ತದೆ. ಇಲ್ಲವಾದರೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ಲೋಕಾಯುಕ್ತದಿಂದ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಇದು ಸಲ್ಲಿಕೆಯಾದ ನಂತರ ಬಿ ರಿಪೋರ್ಟ್ ಆದೇಶ‌ ಹೊರಬೀಳಲಿದೆ. ಸಿದ್ದರಾಮಯ್ಯ (Siddaramaiah) ಪತ್ನಿ ಮೂಡಾದಿಂದ (MUDA) ಪಡೆದಿದ್ದ 14 ಸೈಟ್‌ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ನ್ಯಾಯಾಯಲದ ಮೆಟ್ಟಿಲು ಏರಿದ್ದರು.

Share.
Leave A Reply